ರಾಮನಗರ: ಬಳ್ಳಾರಿ ಕಾರ್ಮಿಕರನ್ನು ಕೆಂಪೇಗೌಡನದೊಡ್ಡಿ ಗ್ರಾಮದಲ್ಲಿ ಕ್ವಾರಂಟೈನ್ ಮಾಡಲು ಮುಂದಾಗಿರುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಗ್ರಾಮದ ದೇವರಾಜು ಅರಸು ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲು ಆರೋಗ್ಯ ಇಲಾಖೆ ಮುಂದಾಗಿದ್ದು, ಇವರನ್ನು ಇಲ್ಲಿ ಕ್ವಾರಂಟೈನ್ ಮಾಡಿದರೆ ನಮ್ಮ ಗ್ರಾಮದವರಿಗೆ ಸಮಸ್ಯೆಯಾಗುತ್ತೆ. ಯಾವುದೇ ಕಾರಣಕ್ಕೂ ನಾವು ಅವರನ್ನು ಇಲ್ಲಿ ಕ್ವಾರಂಟೈನ್ ಮಾಡಲು ಬಿಡುವುದಿಲ್ಲ ಎಂದು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.