ETV Bharat / state

ಕುಖ್ಯಾತ ಮನೆಗಳ್ಳನ ಬಂಧನ : 25 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ - Theft in Ramanagar news

ಜೈಲಿನಿಂದ ಹೊರ ಬಂದ ಮೇಲೂ ಕೂಡ ಈತ ತನ್ನ ಹಳೆ ಚಾಳಿಯನ್ನ ಬಿಟ್ಟಿರಲಿಲ್ಲ. ಈ ಆರೋಪಿ ಹಗಲು ಸಮಯದಲ್ಲೆ ಬೀಗ ಹಾಕಿದ ಮನೆಗಳನ್ನ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ. ಕಳ್ಳತನದಿಂದ ಬಂದ ಹಣದಲ್ಲಿ ಐಷರಾಮಿ ಜೀವನ ನಡೆಸುತ್ತಿದ್ದ. ಇಂತಹ ಖತರ್ನಾಕ್​ ಮನೆಗಳ್ಳನನ್ನ ಬಂಧಿಸಿದ ಮಾಗಡಿ ಪೊಲೀಸರಿಗೆ ಎಸ್ಪಿ ಅನೂಪ್ ಎ.ಶೆಟ್ಟಿ ಅಭಿನಂದಿಸಿದ್ದಾರೆ.

ಕುಖ್ಯಾತ ಮನೆಗಳ್ಳನ ಬಂಧನ
ಕುಖ್ಯಾತ ಮನೆಗಳ್ಳನ ಬಂಧನ
author img

By

Published : Jun 26, 2020, 11:02 PM IST

ರಾಮನಗರ: ಕುಖ್ಯಾತ ಮನೆಗಳ್ಳನನ್ನ ಬಂಧಿಸಿ, 25 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನ ವಶಪಡಿಸಿಕೊಳ್ಳುವಲ್ಲಿ ಜಿಲ್ಲೆಯ ಮಾಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಉದಯಕುಮಾರ್ ಅಲಿಯಾಸ್ ಅಶೋಕ ಬಂಧಿತ ಆರೋಪಿಯಾಗಿದ್ದು, ಈತ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದವನಾಗಿದ್ದಾನೆ. ಈ ಆರೋಪಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಮಾರು 18 ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಬಂಧಿತನಿಂದ 560 ಗ್ರಾಂ ಚಿನ್ನಾಭರಣಗಳು, 3 ಕೆಜಿ ಬೆಳ್ಳಿ ಸಾಮಾಗ್ರಿಗಳು, ಕೃತ್ಯಕ್ಕೆ ಬಳಸುತ್ತಿದ್ದ ಒಂದು ಕಾರು, ಎರಡು ದ್ವಿಚಕ್ರ ವಾಹನಗಳನ್ನ ವಶಪಡಸಿಕೊಳ್ಳಲಾಗಿದೆ.

ಕುಖ್ಯಾತ ಮನೆಗಳ್ಳನ ಬಂಧನ

ಬಂಧಿತ ಆರೋಪಿ ಮಾರ್ಚ್ ತಿಂಗಳಲ್ಲಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹರ್ತಿ ಗ್ರಾಮದ ರೇಣುಕಮ್ಮ ಅವರ ಮನೆ ಬೀಗ ಒಡೆದು 1,20,000 ಬೆಲೆ ಬಾಳುವ ಚಿನ್ನಾಭರಣಗಳನ್ನ ಕಳವು ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗೆ ಇಳಿದ ಸಿಪಿಐ ಮಂಜುನಾಥ್ ಹಾಗೂ ಅವರ ತಂಡ ಆರೋಪಿ ಉದಯಕುಮಾರ್​ನನ್ನ ಬಂಧಿಸಿ ತನಿಖೆ ನಡೆಸಿದಾಗ ಇನ್ನಷ್ಟು ಕಳ್ಳತನದ ಪ್ರಕರಣಗಳು ಹೊರ ಬಂದಿವೆ.

ಮಾಗಡಿ ಸರಹದ್ದಿನಲ್ಲಿ 2 , ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ 15 ಮನೆ ಕಳ್ಳತನದ ಪ್ರಕರಣಗಳು ಹಾಗೂ ತುಮಕೂರು ಜಿಲ್ಲೆಯ 9 ಪ್ರಕರಣಗಳು ಬೆಳಕಿಗೆ ಬಂದಿವೆ. ಬಂಧಿತ ಆರೋಪಿಯು ಈ ಹಿಂದೆ ತುಮಕೂರು ಜಿಲ್ಲೆಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಬಂಧನವಾಗಿ ಕಾರಗೃಹದಲ್ಲಿದ್ದು 2019ನೇ ಇಸವಿಯಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಹೊರ ಬಂದಿದ್ದ. ಜೈಲಿನಿಂದ ಹೊರ ಬಂದ ಮೇಲೂ ಕೂಡ ಈತ ತನ್ನ ಹಳೆ ಚಾಳಿಯನ್ನ ಬಿಟ್ಟಿರಲಿಲ್ಲ. ಈ ಆರೋಪಿ ಹಗಲು ಸಮಯದಲ್ಲೆ ಬೀಗ ಹಾಕಿದ ಮನೆಗಳನ್ನ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ. ಕಳ್ಳತನದಿಂದ ಬಂದ ಹಣದಲ್ಲಿ ಐಷರಾಮಿ ಜೀವನ ನಡೆಸುತ್ತಿದ್ದ. ಇಂತಹ ಖತರ್ನಾಕ್​ ಮನೆಗಳ್ಳನನ್ನ ಬಂಧಿಸಿದ ಮಾಗಡಿ ಪೊಲೀಸರಿಗೆ ಎಸ್ಪಿ ಅನೂಪ್ ಎ.ಶೆಟ್ಟಿ ಅಭಿನಂದಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.