ETV Bharat / state

ರೇಷ್ಮೆ ಮಾರುಕಟ್ಟೆ ಸ್ಥಳಾಂತರಕ್ಕೆ ಯಾವುದೇ ರಾಜಕೀಯ ಕಾರಣವಿಲ್ಲ : ಡಿಸಿಎಂ ಅಶ್ವತ್ಥ್‌ ನಾರಾಯಣ - ಡಿಸಿಎಂ ಅಶ್ವತ್ಥನಾರಾಯಣ ಲೇಟೆಸ್ಟ್​ ನ್ಯೂಸ್

ಪಂಚಮಸಾಲಿ ಮೀಸಲಿಗೆ ಸಂಬಂಧಿಸಿದಂತೆ ಸರ್ಕಾರ ಎಲ್ಲ ರೀತಿಯಲ್ಲೂ ಪರಿಶೀಲನೆ ಮಾಡುತ್ತಿದೆ. ಎಲ್ಲರ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯ ಸಮ್ಮತವಾದ ರೀತಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದು ಬೇಡ..

ಡಿಸಿಎಂ ಅಶ್ವತ್ಥನಾರಾಯಣ
DCM Ashwaththanarayana
author img

By

Published : Feb 22, 2021, 7:58 PM IST

ರಾಮನಗರ : ಜಿಲ್ಲಾ ಕೇಂದ್ರದಲ್ಲಿದ್ದ ರೇಷ್ಮೆ ಮಾರುಕಟ್ಟೆಯನ್ನು ಚನ್ನಪಟ್ಟಣಕ್ಕೆ ಸ್ಥಳಾಂತರಿಸಿರುವುದಕ್ಕೆ ಯಾವುದೇ ರಾಜಕೀಯ ಕಾರಣವಿಲ್ಲ. ಅಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಮಾಡುತ್ತಿರುವುದು ರೈತರಿಗಾಗಿಯೇ ಹೊರತು, ದಲ್ಲಾಳಿಗಳಿಗಾಗಿ ಅಲ್ಲ ಎಂದು ಡಿಸಿಎಂ ‌ಅಶ್ವತ್ಥ್ ನಾರಾಯಣ ಸ್ಪಷ್ಟಪಡಿಸಿದರು.

ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಅವರು, ರಾಮನಗರದಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡಲು ಕೆಲ ಅಡ್ಡಿಗಳಿದ್ದವು. ಈಗಿನ ಮಾರುಕಟ್ಟೆ ಪಕ್ಕದ ಜಮೀನು ಬಿಕ್ಕಟ್ಟು ನ್ಯಾಯಾಲಯದಲ್ಲಿದೆ.

ಎಲ್ಲರಿಗೂ ತಿಳಿದಂತೆ ರಾಮನಗರ ರೇಷ್ಮೆ ಗೂಡು ಮಾರುಕಟ್ಟೆ ಜಗತ್ತಿನಲ್ಲಿಯೇ ಪ್ರಸಿದ್ಧವಾಗಿದೆ. ಹೀಗಾಗಿ, ಇದನ್ನು ವಿಸ್ತರಿಸಿ ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಎಂಬ ಉದ್ದೇಶ ಸರ್ಕಾರಕ್ಕೆ ಇತ್ತು. ಆದರೆ, ಕೆಲ ಅಡ್ಡಿಗಳು ಎದುರಾದ ಕಾರಣ ಚನ್ನಪಟ್ಟಣ ಬಳಿ ವಿಶಾಲ ಜಾಗದಲ್ಲಿ ಮಾರುಕಟ್ಟೆ ಬರುತ್ತಿದೆ ಎಂದರು.

ಮೀಸಲು ಬಗ್ಗೆ ಸಾರ್ವಜನಿಕ ಚರ್ಚೆ ಬೇಡ : ಪಂಚಮಸಾಲಿ ಮೀಸಲಿಗೆ ಸಂಬಂಧಿಸಿದಂತೆ ಸರ್ಕಾರ ಎಲ್ಲ ರೀತಿಯಲ್ಲೂ ಪರಿಶೀಲನೆ ಮಾಡುತ್ತಿದೆ. ಎಲ್ಲರ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯ ಸಮ್ಮತವಾದ ರೀತಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದು ಬೇಡ ಎಂದರು.

ಖಾಸಗಿ ಶಿಕ್ಷಣ ಸಂಸ್ಥೆಗಳ ಪರವಾಗಿ ನಾಳೆ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಪುಟ್ಟಣ್ಣ ಅವರ ಪ್ರತಿಭಟನೆ ಸರ್ಕಾರದ ವಿರುದ್ಧ ಎಂದು ಅರ್ಥೈಸಬಾರದು.

ಅವರು ತಮ್ಮ ಮತದಾರರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿದ್ದಾರೆ ಎಂದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.