ರಾಮನಗರ : ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತದ ಪರಿಣಾಮ ಉಡುಪಿ ಮೂಲದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಕೆಮ್ಮಲ್ಲಿ ದೊಡ್ಡಿ ಗ್ರಾಮದಲ್ಲಿ ಸಂಭವಿಸಿದೆ.
ಅಕ್ಷತಾ, ಡ್ರೈವರ್ ಉಮೇಶ್ ಹಾಗೂ 6 ತಿಂಗಳು ಮಗು ಸುಮಂತ್ ಮೃತರು. ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡವರನ್ನ ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಈ ಕುರಿತು ಸಾತನೂರು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಭಾರಿ ಅಗ್ನಿ ಅವಘಡ: ಏಳು ಮಂದಿ ಸಜೀವ ದಹನ!