ರಾಮನಗರ: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ರಾಮನಗರದ ರಾಯರದೊಡ್ಡಿ ಬಳಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ನಡೆದಿದೆ.
ಬಾಲಗೇರಿಯ ಸಹೋದರರಾದ ಮೂರ್ತಿ (23), ವೆಂಕಟೇಶ್ (33) ಹಾಗೂ ಅಚ್ಚಲುದೊಡ್ಡಿ ನಿವಾಸಿ ರಘು (19) ಮೃತ ಯುವಕರು. ಬೈಕ್ ಸವಾರರಿಬ್ಬರು ಅತೀ ವೇಗವಾಗಿ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಯುವಕರ ಮೃತ ದೇಹವನ್ನು ರಾಮನಗರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಕುರಿತು ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.