ರಾಮನಗರ: ಕಳ್ಳತನ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಪುರ ಹಾಗೂ ಬಿಡದಿ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಲಕ್ಕಿ ಅಲಿಯಾಸ್ ಗುಂಡ, ರಾಜೇಶ್ ಅಲಿಯಾಸ್ ರಾಜ, ರಿಯಾಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಚೂರಿ, ಮಚ್ಚು, 11 ದ್ವಿಚಕ್ರವಾಹನ, 11 ಮೊಬೈಲ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಡದಿ ಹಾಗೂ ದೊಡ್ಡಮುದವಾಡಿ ರಸ್ತೆಯಲ್ಲಿ 7 ಜನರ ಗುಂಪು ಮಾರಕಾಸ್ತ್ರ ಹಿಡಿದು ದರೋಡೆಗೆ ಹೊಂಚು ಹಾಕುತ್ತಿತ್ತು ಎನ್ನಲಾಗಿದೆ. ಖಚಿತ ಮಾಹಿತಿ ಪಡೆದ ಬಿಡದಿ ಪಿಎಸ್ಐ ಹೇಮಂತ್ ತ್ವರಿತ ಕಾರ್ಯಾಚರಣೆ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಲವರು ತಲೆ ಮರೆಸಿಕೊಂಡಿದ್ದು, ಶೋಧ ಕಾರ್ಯ ಮುಂದುವರೆದಿದೆ.
ಇದನ್ನೂ ಓದಿ: ವೇಶ್ಯಾವಾಟಿಕೆ ನಡೆಸುತಿದ್ದ ಲಾಡ್ಜ್ ಮೇಲೆ ಪೊಲೀಸ್ ದಾಳಿ: ಬಾಂಗ್ಲಾ ಯುವತಿಯ ರಕ್ಷಣೆ
ಆರೋಪಿಗಳು 12 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ರಾಮನಗರ ಎಸ್ಪಿ ಗಿರೀಶ್ ಅಭಿನಂದನೆ ಸಲ್ಲಿಸಿದ್ದಾರೆ.