ETV Bharat / state

ಈಜಲು ಹೋಗಿ ಮೆಡಿಕಲ್ ವಿದ್ಯಾರ್ಥಿಗಳು ನಾಪತ್ತೆ.. ಕೆರೆಯಲ್ಲಿ ಮುಳುಗಿರುವ ಶಂಕೆ

ಕೆರೆಯಲ್ಲಿ ಈಜಲು ಹೋಗಿ ಮೂವರು ಮೆಡಿಕಲ್ ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾವತ್ತೂರು ಕೆರೆ ಬಳಿ ನಡೆದಿದೆ.

three-medical-students-gone-missing-in-mavattur-lake
ಈಜಲು ಹೋಗಿ ಮೆಡಿಕಲ್ ವಿದ್ಯಾರ್ಥಿಗಳ ನಾಪತ್ತೆ..ಕೆರೆಯಲ್ಲಿ ಮುಳುಗಿರುವ ಶಂಕೆ
author img

By

Published : Sep 13, 2022, 3:21 PM IST

ರಾಮನಗರ : ಕೆರೆಯಲ್ಲಿ ಈಜಲು ಹೋಗಿ ಮೂವರು ಮೆಡಿಕಲ್ ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾವತ್ತೂರು ಕೆರೆ ಬಳಿ ನಡೆದಿದೆ. ನಾಪತ್ತೆಯಾದವರನ್ನು ಸಚಿನ್ (26), ಜಾವೇದ್​ ಅಹಮದ್ ಮುಲ್ಲಾ (26), ನಿರಂಜನ್ (26) ಎಂದು ಗುರುತಿಸಲಾಗಿದೆ. ನಾಪತ್ತೆಯಾದ ಮೂವರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ.

ನಾಪತ್ತೆಯಾದ ವಿದ್ಯಾರ್ಥಿಗಳು ದಯಾನಂದ ಸಾಗರ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದು ಬಂದಿದೆ. ಈ ಮೂವರು ಗೆಳೆಯರು ನಿನ್ನೆ ಕಾಲೇಜಿನಿಂದ ಹೊರಟು, ಕನಕಪುರದ ಮಾವತ್ತೂರು ಕೆರೆಗೆ ಈಜಲು ಬಂದಿದ್ದರು. ಬಳಿಕ ನಾಪತ್ತೆಯಾಗಿದ್ದು, ಕೆರೆಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಮಾವತ್ತೂರು ಕೆರೆ ಬಳಿ ಇವರ ಬೈಕ್ ಪತ್ತೆಯಾಗಿದ್ದು, ಸದ್ಯ ನಾಪತ್ತೆಯಾದ ವಿದ್ಯಾರ್ಥಿಗಳ ಪತ್ತೆಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಈ ಸಂಬಂಧ ಕನಕಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಸ್ಟೇಷನ್​ಗೆ ನುಗ್ಗಿ ಪೊಲೀಸರಿಗೆ ಥಳಿತ: ಆರೋಪಿ ಬಿಡುಗಡೆಗೆ ಒತ್ತಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.