ETV Bharat / state

ನಿಂತಿದ್ದ ಕಾರಿಗೆ ಬೈಕ್​ ಡಿಕ್ಕಿ: ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ - ಈಟಿವಿ ಭಾರತ ಕನ್ನಡ

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ಹೈವೇಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

two-died-in-accident-in-bengaluru-mysuru-express-high-way
ನಿಂತಿದ್ದ ಕಾರಿಗೆ ಬೈಕ್​ ಡಿಕ್ಕಿ : ಇಬ್ಬರು ಸಾವು..ಓರ್ವ ಗಂಭೀರ
author img

By

Published : May 1, 2023, 6:27 PM IST

Updated : May 1, 2023, 7:11 PM IST

ರಾಮನಗರ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ಹೆದ್ದಾರಿಯಲ್ಲಿ ನಡೆದ ರಸ್ತೆ​ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಓಕಳಿಪುರ ನಿವಾಸಿ ಯಾಸೀನ್​(22), ಮಾಗಡಿ ರಸ್ತೆ ನಿವಾಸಿ ರೆಹಮಾನ್​ (18) ಎಂದು ಗುರುತಿಸಲಾಗಿದ್ದು, ಗಾಯಾಳುವಿನ ಗುರುತು ಇನ್ನೂ ಪತ್ತೆಯಾಗಿಲ್ಲ. ಮೂವರು ಬೈಕ್ ಸವಾರರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ.

ಬೆಂಗಳೂರಿನಿಂದ ಮೈಸೂರಿಗೆ ಒಂದೇ ದ್ವಿಚಕ್ರ ವಾಹನದಲ್ಲಿ ಈ ಮೂವರು ಆಗಮಿಸುತ್ತಿದ್ದರು. ಈ ವೇಳೆ ಹೆದ್ದಾರಿ ಬದಿ ಕೆಟ್ಟು ನಿಂತಿದ್ದ ಕಾರಿಗೆ ಮೂವರು ತೆರಳುತ್ತಿದ್ದ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಮೂವರು ನೆಲಕ್ಕುರುಳಿದ್ದು, ಈ ಸಂದರ್ಭ ಹಿಂದಿನಿಂದ ಬಂದ ಮತ್ತೊಂದು ಕಾರು ಮೂವರ ಮೇಲೆ ಹರಿದಿದೆ. ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಇನ್ನು, ಕೆಲ ದಿನಗಳ ಹಿಂದೆಯಷ್ಟೇ ಈ ಹೆದ್ದಾರಿಯಲ್ಲಿ ಒಂದೇ ಕುಟುಂಬದ ಐವರು ಅಪಘಾತದಲ್ಲಿ ಮೃತಪಟ್ಟಿದ್ದರು.

ಇದನ್ನೂ ಓದಿ : ಬೆಳಗಾವಿ: ಕುಡಿದ ಅಮಲಿನಲ್ಲಿ ಯುವಕನಿಗೆ ಚಾಕುವಿನಿಂದ ಇರಿದು ಕೊಂದ ಮಹಿಳೆ

Last Updated : May 1, 2023, 7:11 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.