ETV Bharat / state

ರಾಮನಗರ ಜಿಲ್ಲೆಯಲ್ಲಿ ಇಂದು ಎರಡು ಕೊರೊನಾ ಪಾಸಿಟಿವ್.. - ಕನಕಪುರ

ಸೋಂಕಿತರಿಬ್ಬರಿಗೂ ರಾಮನಗರ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25ಕ್ಕೇರಿದೆ.

Ramanagara
Ramanagara
author img

By

Published : Jun 16, 2020, 6:14 PM IST

ರಾಮನಗರ : ಜಿಲ್ಲೆಯಲ್ಲಿ ಇಂದು ಎರಡು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಕನಕಪುರ ಹಾಗೂ ಚನ್ನಪಟ್ಟಣ ತಾಲೂಕಿನಲ್ಲಿ ಒಂದೊಂದು ಕೇಸ್ ಪತ್ತೆಯಾಗಿದೆ. ಚನ್ನಪಟ್ಟಣ ತಾಲೂಕಿನ 25 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ಈಕೆ ಸೋಂಕಿತ ವ್ಯಕ್ತಿ P-6138ನ ಸಹೋದರಿಯಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ವಾಸವಿದ್ದರು. ಇವರ ಮನೆಗೆ ಸೋಂಕಿತ P-6138 ಯುವಕ 3-4 ಬಾರಿ ಹೋಗಿ ಬಂದಿದ್ದ ಎನ್ನಲಾಗಿದೆ. ಜೂನ್ 10 ರಂದು P- 6138 ಯುವಕನಿಗೆ ಕೊರೊನಾ ಸೋಂಕು ತಗುಲಿತ್ತು.

ಈ ಹಿನ್ನೆಲೆಯಲ್ಲಿ ಸೋಂಕಿತನ ಸಹೋದರಿ ಹಾಗೂ ಭಾವನನ್ನ ಚನ್ನಪಟ್ಟಣ ಹೊನ್ನಾಯಕನಹಳ್ಳಿಯಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ನಂತರ‌ ಆತನ ಸಂಪರ್ಕಕ್ಕೆ‌ ಬಂದವರ ಪೈಕಿ ಸಹೋದರಿಗೆ ಕೊರೊನಾ ದೃಢಪಟ್ಟಿದೆ.

ಇದೇ ರೀತಿ ಕನಕಪುರ ತಾಲೂಕಿನಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. 40 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಅಧಿಕಾರಿಗಳು ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಕಲೆ ಹಾಕುತ್ತಿದ್ದಾರೆ. ಅಲ್ಲದೆ ಸೋಂಕಿತರಿಬ್ಬರಿಗೂ ರಾಮನಗರ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25ಕ್ಕೇರಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.