ETV Bharat / state

ಸೂಕ್ತ ನೆರೆ ಪರಿಹಾರಕ್ಕೆ ಆಗ್ರಹಿಸಿ ವಾಟಾಳ್​ ನಾಗರಾಜ್ ಪ್ರತಿಭಟನೆ... ಹೆದ್ದಾರಿ ತಡೆದು ಆಕ್ರೋಶ

ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಐಜೂರು ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ವಾಟಾಳ್​ ನಾಗರಾಜ್ ಪ್ರತಿಭಟನೆ
author img

By

Published : Aug 29, 2019, 5:38 AM IST

ರಾಮನಗರ: ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜನರ ನೋವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ನಗರದ ಐಜೂರು ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಹಿಂದೆಂದೂ ಕಂಡು ಕೇಳರಿಯದ ರೀತಿ ಪ್ರವಾಹ ಉಂಟಾಗಿದೆ. ಹಲವಾರು ಜನ ಮೃತಪಟ್ಟಿದ್ದಾರೆ. ನೆರೆ ಸಂತ್ರಸ್ತರು ಮನೆಯಿಲ್ಲದೇ ನಿರಾಶ್ರಿತರಾಗಿದ್ದಾರೆ. ಆದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿಲ್ಲ. ರಾಜ್ಯ ಸರ್ಕಾರ ನೆರೆಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಟ್ಟಿಲ್ಲ ಎಂದು ಸರ್ಕಾರದ ನಡೆಯನ್ನು ಟೀಕಿಸಿದರು.

ವಾಟಾಳ್​ ನಾಗರಾಜ್ ಪ್ರತಿಭಟನೆ

ಪ್ರಧಾನಿ ಮೋದಿ ನೆರೆ ಹಾವಳಿ ಪ್ರದೇಶಕ್ಕೆ ಕೂಡಲೇ ಭೇಟಿ ನೀಡಬೇಕು ಮತ್ತು ವಿಪತ್ತು ನಿರ್ವಣೆಗೆ 50 ಸಾವಿರ ಕೋಟಿ ರೂ. ನೆರವು ಘೋಷಿಸಿಬೇಕೆಂದು ಆಗ್ರಹಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಇಂದಿರಾ ಕ್ಯಾಂಟಿನ್​ಗಳನ್ನು ಮುಚ್ಚುವ ಹುನ್ನಾರ ಮಾಡಿದ್ದಾರೆ. ಸಿಎಂ ದ್ವೇಷ ಬಿಟ್ಟು ಇಂದಿರಾ ಕ್ಯಾಂಟಿನ್ ಮುಚ್ಚವ ನಿರ್ಧಾರ ಕೈಬಿಡಬೇಕು. ಒಂದು ವೇಳೆ ಇಂದಿರಾ ಕ್ಯಾಂಟಿನ್ ಮುಚ್ವಿದರೆ ಉಗ್ರ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು.

Intro:Body:ರಾಮನಗರ : ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜನತೆ ನೋವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕನ್ನಡ ಪರ ಹೋರಾಟಗಾರ ವಾಟಳ್ ನಾಗರಾಜ್ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ನಗರದ ಐಜೂರು ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ದಿಕ್ಕಾರ ಕೂಗಿ ವಾಟಾಳ್ ನಾಗರಾಜ್ ಪ್ರತಿಭಟಿಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ನೆರೆ ಬಂದು ಹಲವಾರು ಮಂದಿ ಮೃತಪಟ್ಟಿದ್ದಾರೆ ಅದರೂ ಪ್ರಧಾನಿಗಳು ರಾಜ್ಯಕ್ಕೆ ಬೇಟಿ ನೀಡಿಲ್ಲ,ಅಲ್ಲದೆ ರಾಜ್ಯ ಸರ್ಕಾರ ನೆರೆಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಟ್ಟಿಲ್ಲ. ಕೇವಲ ಮೂವರು ಉಪ ಮುಖ್ಯಮಂತ್ರಿಗಳನ್ನು ಮಾಡುವುದರಲ್ಲೇ ಕಾಲಕಳೆಯುತ್ತಿದ್ದಾರೆ ಇದು ಕರುಡು ರಾಜ್ಯದ ಕುಂಟ ಅಧಿಪತಿ ಎಂದು ಸರ್ಕಾರದ ನಡೆಯನ್ನು ಟೀಕಿಸಿದ ಅವರು ತತ್ತಕ್ಷಣವೇ ಪ್ರಧಾನಿ ಮೋದಿ ನೆರೆ ಹಾವಳಿ ಪ್ರದೇಶಕ್ಕೆ ಬೇಟಿ ನೀಡಬೇಕು ಮತ್ತು ವಿಪತ್ತು ನಿರ್ವಣೆಗೆ 50 ಸಾವಿರ ಕೋಟಿ ನೆರವು ಘೋಷಿಸಿಬೇಕೆಂದು ಅಗ್ರಹಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಇದಕ್ಕೆ ಪುಷ್ಠಿ ನೀಡುವಂತೆ ಇಂದಿರಾ ಕ್ಯಾಂಟಿನ್ ಗಳನ್ನು ಮುಚ್ಚುವ ಹುನ್ನಾರ ಮಾಡಿದ್ದಾರೆ ಎಂದು ಆರೋಪಿಸಿದ ವಾಟಳ್ ನಾಗರಾಜ್ ಸಿಎಂ ತಮ್ಮ ದ್ವೇಷ ಬಿಟ್ಟು ಇಂದಿರಾ ಕ್ಯಾಂಟಿನ್ ಗಳನ್ನು ಮುಚ್ಚವ ನಿರ್ಧಾರ ಕೈಬಿಡಬೇಕು ಒಂದು ವೇಳೆ ಕ್ಯಾಂಟಿನ್ ಗಳನ್ನು ಮುಚ್ವಿದರೆ ಉಗ್ರ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.