ETV Bharat / state

ರಾಮನಗರದಲ್ಲಿ ಫೆ.20ರಿಂದ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ' ಕಾರ್ಯಕ್ರಮ

author img

By

Published : Feb 18, 2021, 6:37 AM IST

'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ' ಕಾರ್ಯಕ್ರಮವು ರಾಮನಗರದಲ್ಲಿ ಫೆ.20ರಿಂದ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಅಂದು ಭೇಟಿ ನೀಡುವ ಗ್ರಾಮದಲ್ಲೇ ವಾಸ್ತವ್ಯ ಹೂಡಿ ಸಾರ್ವಜನಿಕರಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಸ್ವೀಕರಿಸಿ ಪರಿಹಾರ ನೀಡಲಿದೆ.

Ramnagar
ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ

ರಾಮನಗರ: ಜಿಲ್ಲೆಯ 4 ತಾಲೂಕುಗಳಲ್ಲಿ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ' ಕಾರ್ಯಕ್ರಮವನ್ನು ಫೆ.20ರಂದು ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಅಧಿಕಾರಿಗಳ ತಂಡ ಅಂದು ಭೇಟಿ ನೀಡುವ ಗ್ರಾಮದಲ್ಲೇ ವಾಸ್ತವ್ಯ ಹೂಡಿ ಸಾರ್ವಜನಿಕರಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಸ್ವೀಕರಿಸಿ ಪರಿಹಾರ ನೀಡಲಿದೆ.

ಮಾಗಡಿ ತಾಲೂಕಿನ ಮಾಡಬಾಳ್ ಹೋಬಳಿಯ ಅವ್ವೇರಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಮಾಗಡಿ ತಾಲೂಕು ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೂಡಲಿದ್ದಾರೆ.

ರಾಮನಗರ ತಾಲೂಕಿನ ಕೈಲಾಂಚ ಹೋಬಳಿಯ ಲಕ್ಕೋಜನಹಳ್ಳಿ ಗ್ರಾಮದಲ್ಲಿ ರಾಮನಗರ ತಾಲೂಕು ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೂಡಲಿದ್ದಾರೆ.

ಇದನ್ನು ಓದಿ: ಪಶ್ಚಿಮ ಬಂಗಾಳ ಸಚಿವನ ಮೇಲೆ ಬಾಂಬ್ ದಾಳಿ

ಚನ್ನಪಟ್ಟಣ ತಾಲೂಕಿನ ಕಸಬಾ ಹೋಬಳಿಯ ಹೆಚ್.ಮೊಗೇನಹಳ್ಳಿ ಗ್ರಾಮದಲ್ಲಿ ಅಪರ ಜಿಲ್ಲಾಧಿಕಾರಿಗಳು, ಚನ್ನಪಟ್ಟಣ ತಾಲೂಕು ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೂಡಲಿದ್ದಾರೆ.

ಕನಕಪುರ ತಾಲೂಕಿನ ಮರಳವಾಡಿ ಹೋಬಳಿಯ ಬನವಾಸಿ ಗ್ರಾಮದಲ್ಲಿ ರಾಮನಗರ ಉಪವಿಭಾಗಾಧಿಕಾರಿ, ಕನಕಪುರ ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೂಡಲಿದ್ದಾರೆ.

ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಡುವ ಪಹಣಿ ತಿದ್ದುಪಡಿ, ಸಾಮಾಜಿಕ ಭದ್ರತೆ ಯೋಜನೆ ಪಿಂಚಣಿಗಳ ಮಂಜೂರಾತಿ ಪತ್ರ ವಿತರಣೆ, ಆಹಾರ ಪಡಿತರ ಚೀಟಿ ವಿತರಣೆ, ಚುನಾವಣಾ ಗುರುತಿನ ಚೀಟಿ ವಿತರಣೆ, ಆಶ್ರಯ ಮತ್ತು ಸ್ಮಶಾನಕ್ಕೆ ಜಮೀನು ಕಾಯ್ದಿರಿಸುವಿಕೆಗಾಗಿ ಪ್ರಸ್ತಾವನೆ ಪರಿಶೀಲನೆ ಮತ್ತು ಅಂಗೀಕಾರ ಹಾಗೂ ಪೌತಿ ಖಾತೆ ಪ್ರಕ್ರಿಯೆಗಳನ್ನು ವಿಲೇವಾರಿಗೂಳಿಸಲಾಗುವುದು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿ ಹಾಗೂ ಸಮಸ್ಯೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಸಲ್ಲಿಸಿ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.