ರಾಮನಗರ: ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಬೇಕು ಎಂದು ಆಗ್ರಹಿಸಿ ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮಸ್ಥರು ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು.
ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದು ಹೋಗಿದ್ದ ವೃದ್ಧೆಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ಈ ಹಿನ್ನಲೆಯಲ್ಲಿ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಿ ಎಂದು ಒತ್ತಾಯಿಸಿದರು.
ಬನ್ನಿಕುಪ್ಪೆ ಬಳಿಯ ಲಕ್ಕೋಜನಹಳ್ಳಿ ಗ್ರಾಮದ ವೃದ್ಧೆಗೆ ವಿಕ್ಟೋರಿಯಾ ಆಸ್ಪತ್ರೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕವಾಗಿ ಬನ್ನಿಕುಪ್ಪೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ವೈದ್ಯಾಧಿಕಾರಿ ಒಂದಿಬ್ಬರು ಸಿಬ್ಬಂದಿಯನ್ನು ಮಾತ್ರ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿದ್ದರು. ಉಳಿದವರನ್ನು ಕ್ವಾರಂಟೈನ್ಗೆ ಒಳಪಡಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಕೊರೊನಾ ಸೋಂಕು ತಗಲುವ ಭೀತಿ ಎದುರಾಗಿದೆ. ಕೂಡಲೇ ವೈದ್ಯರು ಸೇರಿದಂತೆ ಸಿಬ್ಬಂದಿಯನ್ನು ಕ್ವಾರಂಟೈನ್ಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.