ETV Bharat / state

ರಾಮನಗರದಲ್ಲಿ ಕಾಡಾನೆ ದಾಳಿ: ಓರ್ವ ವ್ಯಕ್ತಿ ಕಾಲು ಮುರಿತ, ಹಸು ಸಾವು

ಒಂಟಿ ಸಲಗ ದಾಳಿಗೆ ಸಿಲುಕಿ ವ್ಯಕ್ತಿ ಕಾಲು ಮುರಿದು ಗಂಭೀರ - ರೈತರಲ್ಲಿ ಆತಂಕ ಹೆಚ್ಚಿಸಿದ ಕಾಡಾನೆ ದಾಳಿ - ಜನವಸತಿ ಪ್ರದೇಶದಲ್ಲೇ ಮನುಷ್ಯನ ದಾಳಿ ಮಾಡಿದ ಒಂಟಿ ಸಲಗ.

wild-elephant-attack-in-ramanagara
ರಾಮನಗರದಲ್ಲಿ ಕಾಡಾನೆ ದಾಳಿ: ಓರ್ವ ವ್ಯಕ್ತಿ ಕಾಲು ಮುರಿತ, ಹಸು ಸಾವು
author img

By

Published : Feb 15, 2023, 10:44 PM IST

ರಾಮನಗರ: ಚನ್ನಪಟ್ಟಣ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ಒಂಟಿಸಲಗ ದಾಳಿಗೆ ಸಿಲುಕಿ ವ್ಯಕ್ತಿ ಕಾಲು ಮುರಿದು ಗಂಭೀರವಾಗಿ ಗಾಯಗೊಂಡಿದ್ದು, ಒಂಟಿ ಸಲಗದ ದಾಳಿಗೆ ಹಸು ಸಾವು ಸಾವನಪ್ಪಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ಮಾಡಿದ್ದು. ಒಂಟಿಸಲಗದ ದಾಳಿಗೆ ಹಸು ಸಾವನ್ನಪ್ಪಿದ್ದು, ಜಮೀನಿಗೆ ತೆರಳಿದ್ದ ರೈತ ಗೋಪಾಲ್​ ಎನ್ನುವವರ ಕಾಲು ಮುರಿದಿದೆ. ರೈತರ ಕೃಷಿ ಜಮೀನಿನ ಮೇಲೆ ದಾಳಿ ಮಾಡುತ್ತಿದ್ದ ಕಾಡಾನೆಗಳು ಈಗ ಜನವಸತಿ ಪ್ರದೇಶದಲ್ಲೇ ಮನುಷ್ಯನ ಮೇಲೆ ಮತ್ತು ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿರುವುದು ಈ ಭಾಗದ ರೈತರಲ್ಲಿ ಆತಂಕಕ್ಕೆ ಉಂಟುಮಾಡಿದೆ. ಒಂಟಿ ಸಲಗದ ದಾಳಿಗೆ ಸಿಲುಕಿ ಗಾಯಗೊಂಡಿದ್ದ ಹಸು ನರಳಿ ಸ್ಥಳದಲ್ಲೇ ಸಾವನಪ್ಪಿದ್ದು, ಗಾಯಾಳು ಗೋಪಾಲ್​ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಬೇಟಿ ನೀಡಿದ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡಸಿದ್ದು, ನಿರಂತರವಾಗಿ ಕಾಡಾನೆ ದಾಳಿ ನಡೆಯುತ್ತಿದ್ದರು ಆನೆ ದಾಳಿ ತಡೆಯಲು ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

ಇಬ್ಬರನ್ನು ಬಲಿ ಪಡೆದ ಹುಲಿ ಬೆಚ್ಚಿಬಿದ್ದ ಜನ : ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣ ಪತ್ತೆ ಮುನ್ನಲೆಗೆ ಬಂದಿದೆ. 24 ಗಂಟೆಗಳಲ್ಲಿ ಹುಲಿಯೊಂದು ಇಬ್ಬರನ್ನು ಬಲಿ ಪಡೆದಿದೆ. ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕನನ್ನು ಮತ್ತು ಮೊಮ್ಮಗನ ಶವ ನೋಡಲು ಬಂದ ತಾತನನ್ನು ಹುಲಿ ಬಲಿ ಪಡೆದಿರುವ ಘಟನೆ ಫೇ.13ರಂದು ನಡೆದಿದೆ.

ಕುಟ್ಟ ಗ್ರಾಮದ ಪಲ್ಲೇರಿಯಲ್ಲಿ ಹುಲಿ ದಾಳಿ ಮಾಡಿದ್ದು, ಮೃತರನ್ನು ಪಲ್ಲೇರಿಯ ರಾಜು ಎಂದು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ವನ್ಯಜೀವಿಗಳ ಹಾವಳಿಯಿಂದ ಬೆಳೆಗಾರರು ಹಾಗೂ ರೈತರು ಕಂಗಾಲಾಗಿದ್ದಾರೆ. ಪ್ರತಿನಿತ್ಯ ಕಾಡಿನಿಂದ ನಾಡಿಗೆ ಹೆಜ್ಜೆ ಇಡುತ್ತಿರುವ ಕಾಡು ಪ್ರಾಣಿಗಳಿಂದ ಕೊಡಗಿನ ಬೆಳೆಗಾರರು ಅತಂತ್ರರಾಗಿದ್ದರು.

ನಿಟ್ಟುಸಿರು ಬಿಟ್ಟ ಕೊಡಗಿನ ಜನ : ಇಬ್ಬರನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಅಧಿಕಾರಿಗಳು ಮಂಗವಾರದಂದು ಸೆರೆ ಹಿಡಿದಿದ್ದಾರೆ. ಇದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಕಾಫಿ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿ ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ಕೂಬಿಂಗ್​ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿದಿದ್ದಾರೆ.

ಕಾಫಿ ತೋಟದಲ್ಲಿ ಕಾಣಿಸಿಕೊಂಡ ಪರಿಣಾಮ ಸ್ಥಳೀಯರಲ್ಲಿ ಭಯದ ವಾತಾವರಣ ಉಂಟಾಗಿತ್ತು. ಭಯದಿಂದ ಸುತ್ತಮುತ್ತಲಿನ ಕಾಫಿ ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು ಮನೆಯನ್ನು ಕಾಲಿ ಮಾಡಿ, ಹುಲಿಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ, ಹುಲಿಗೆ ಅರವಳಿಕೆ ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ ಕ್ಷೇತ್ರಕ್ಕೆ ಪ್ರಸನ್ನ ಪಿ ಗೌಡ ಕಾಂಗ್ರೆಸ್ ಅಭ್ಯರ್ಥಿ​: ಜಿಲ್ಲಾ ಕೈ ಅಧ್ಯಕ್ಷ ಗಂಗಾಧರ್ ಪರೋಕ್ಷ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.