ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೊಡ್ಡನಹಳ್ಳಿ ಗ್ರಾಮದಲ್ಲಿ ಮಹದೇವ ಎಂಬ ರೈತನ ಮೇಲೆ ಕಾಡಾನೆ ದಾಳಿ ಮಾಡಿದೆ. ದೊಡ್ಡಹಳ್ಳಿ ಗ್ರಾಮದ ರೈತ ಮಹದೇವ ಎಂಬುವರು ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆಯೊಂದು ದಾಳಿ ಮಾಡಿದೆ. ಪರಿಣಾಮ ರೈತನ ಕಾಲು, ಹೊಟ್ಟೆ ಭಾಗಕ್ಕೆ ಗಾಯವಾಗಿದೆ. ಗಾಯಗೊಂಡ ರೈತ ಮಹದೇವರನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಭಾಗದಲ್ಲಿ ಕಾಡಾನೆಗಳ ಉಪಟಳ ಜಾಸ್ತಿ ಇದ್ದು, ಇಷ್ಟು ದಿನ ರೈತರ ಬೆಳೆಗಳ ಮೇಲೆ ದಾಳಿ ಮಾಡುತ್ತಿದ್ದ ಆನೆಗಳ ಹಿಂಡು ಇಂದು ರೈತನ ಮೇಲೆ ದಾಳಿ ಮಾಡಿರುವುದು ಈ ಭಾಗದ ರೈತರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ರೈತರು ಎಷ್ಟೇ ಬಾರಿ ಅರಣ್ಯ ಇಲಾಖೆಗೆ ಮನವಿ ಮಾಡಿದರೂ ಕೂಡ ಆನೆ ದಾಳಿ ತಡೆಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ.
ಇದನ್ನೂ ಓದಿ: ತುಮಕೂರು: ಕೌಟುಂಬಿಕ ಕಲಹ.. ಮಚ್ಚಿನಿಂದ ಕೊಚ್ಚಿ ಪತ್ನಿಯ ಕೊಂದ ಪತಿ
ತಾಲೂಕಿನಾದ್ಯಂತ ರೈತರ ಕೃಷಿ ಬೆಳೆಗಳ ಮೇಲೆ ಆನೆ ದಾಳಿಗಳು ಪ್ರತಿದಿನ ನಡೆಯುತ್ತಿದ್ದರೂ ಕೂಡ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ