ರಾಮನಗರ: ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ನವ ವಿವಾಹಿತೆಯನ್ನ ಕೊಲೆ ಮಾಡಿರುವ ಘಟನೆ ಮಾಗಡಿ ತಾಲೂಕಿನ ಹಾಲಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಪೂರ್ಣಿಮಾ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪತಿ ನಾಗರಾಜನೇ ಕೊಲೆ ಮಾಡಿ ಪರಾರಿಯಾಗಿರುವ ಶಂಕೆಯನ್ನು ಪೋಷಕರು ವ್ಯಕ್ತಪಡಿಸಿದ್ದಾರೆ.
ಆರು ತಿಂಗಳ ಹಿಂದೆಯಷ್ಟೇ ಇವರಿಬ್ಬರು ವಿವಾಹವಾಗಿದ್ದರು. ಇಂದು ಸಂಜೆ ಹುಡುಗನ ಪೋಷಕರು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೊಲೆಗೆ ಪ್ರಮುಖ ಕಾರಣ ತಿಳಿದು ಬಂದಿಲ್ಲ. ಈ ಘಟನೆ ಕುರಿತು ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.