ರಾಮನಗರ : ಡಿ.ಕೆ.ಶಿವಕುಮಾರ್ ಅವರು ಅಧಿಕಾರದಲ್ಲಿದ್ದಾಗ ಫೋನ್ ಟ್ಯಾಪಿಂಗ್ ಮಾಡಿಸಿ ನನ್ನ ಮೇಲೆಯೇ ಈ ಹಿಂದೆ ಫೋನ್ ಕದ್ದಾಲಿಕೆ ಆರೋಪ ಮಾಡಿದ್ದರು. ಅವರು ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯ ಸಿ.ಪಿ.ಯೋಗೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು.
ಚನ್ನಪಟ್ಟಣ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಕಳ್ಳ. ಇನ್ನೊಬ್ಬರ ಮೇಲೆ ಆರೋಪ ಮಾಡೋದು ಏನಿದೆ. ಅವರ ಫೋನ್ ಕದ್ದಾಲಿಕೆ ಮಾಡಿ ಯಾವ ರಾಜ್ಯ ಗೆಲ್ಲಬೇಕಿದೆ ಎಂದು ಗುಡುಗಿದರು.
ಅವರ ಫೋನ್ ಕದ್ದಾಲಿಕೆಯಿಂದ ಆಗಬೇಕಾಗಿರೋದು ಏನು, ಯಾವ ಉದ್ದೇಶಕ್ಕಾಗಿ ಅವರ ಫೋನ್ ಟ್ಯಾಪ್ ಮಾಡಬೇಕು. ಅದೊಂದು ಸುಳ್ಳು ಆರೋಪ ಎಂದರು.