ರಾಮನಗರ: ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಚುಂಚು ಫಾಲ್ಸ್ ಬಳಿ ಸಂಭವಿಸಿದೆ. ಪ್ರವೀಣ್ ಚಂದ್ರ(26) ಮೃತ ಯುವಕನಾಗಿದ್ದಾನೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಾಯದ ಸ್ಥಳದಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವ ವೇಳೆ ಅವಘಡ ಸಂಭವಿಸಿದೆ. ಯುವಕನಿಗೆ ಬಂಡೆಗಳು ತಗುಲಿ ತೀವ್ರ ಗಾಯಗೊಂಡು ಅಸುನೀಗಿದ್ದಾನೆ. ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಬಗ್ಗೆ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪ್ರೀತಿಸಿದ ರೌಡಿಗೋಸ್ಕರ ಕಾಲುವೆ ಹಾರಿ ಹೋದ ಬಾಲಕಿ: ಹುಡುಕಾಟಕ್ಕಿಳಿದ ಪೊಲೀಸರಿಗೆ ಸುಸ್ತು