ಶಿವಮೊಗ್ಗ: ಜಾನುವಾರು ಸಾಗಣೆ ಮಾಡುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ 10 ಜಾನುವಾರುಗಳು ಸ್ಥಳದಲ್ಲಿಯೇ ಸಾವಿಗೀಡಾಗಿವೆ.
ತೀರ್ಥಹಳ್ಳಿ ತಾಲೂಕು ದಾನಸಾಲೆ ಬಳಿ ಈ ಘಟನೆ ಸಂಭವಿಸಿದೆ. ದಾವಣಗೆರೆಯಿಂದ ಮಂಗಳೂರು ಕಡೆ ಹೊರಟಿದ್ದ ಕ್ಯಾಂಟರ್ ಬೆಳಗಿನಜಾವ ಪಲ್ಟಿಯಾಗಿದೆ. ಕ್ಯಾಂಟರ್ನಲ್ಲಿ 20 ಜಾನುವಾರುಗಳನ್ನು ಸಾಗಣೆ ಮಾಡಲಾಗುತ್ತಿತ್ತು. ಇದರಲ್ಲಿ 10 ಸಾವಿಗೀಡಾಗಿದ್ದು, ಉಳಿದವು ಗಾಯಗಳಾಗಿವೆ.
ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ತೀರ್ಥಹಳ್ಳಿ ಜೆ.ಸಿ. ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಯಾಂಟರ್ನಲ್ಲಿದ್ದ ಜಾನುವಾರುಗಳನ್ನು ಅಕ್ರಮವಾಗಿ ಸಾಗಣೆ ನಡೆಸಲಾಗುತ್ತಿತ್ತಾ ಎಂಬುದರ ಬಗ್ಗೆ ತನಿಖೆ ನಡೆಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಈ ಕುರಿತು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.