ಶಿವಮೊಗ್ಗ: ಜಿಲ್ಲೆಯಲ್ಲಿ ನಿನ್ನೆ 1049 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದು ಜಿಲ್ಲೆಯ ಜನರಲ್ಲಿ ನಿಜಕ್ಕೂ ಆಂತಕವನ್ನುಂಟು ಮಾಡಿದೆ.
ಕೇವಲ 283 ಜನ ಗುಣಮುಖರಾಗಿದ್ದು, ಕೊರೊನಾಗೆ 11 ಜನ ಬಲಿಯಾಗಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 506ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 5,363 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ಫ್ಯೂ ನಿಯಮ ಉಲ್ಲಂಘಿಸಿದ 585 ವಾಹನಗಳು ಜಪ್ತಿ...
ಕೊರೊನಾ ಅಟ್ಟಹಾಸ ಮುಂದುವರಿಸಿದ್ದು, ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ ರಾಜ್ಯಾದ್ಯಂತ ಕಟ್ಟುನಿಟ್ಟಿನ ಲಾಕ್‍ಡೌನ್ ಜಾರಿ ಮಾಡಲಾಗಿದೆ. ಹಾಗಾಗಿ ಲಾಕ್‍ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರ ಒಟ್ಟು 585 ವಾಹನಗಳನ್ನು (500 ದ್ವಿ ಚಕ್ರವಾಹನ, ಮತ್ತು 10 ಆಟೋ ಹಾಗೂ 75 ಕಾರುಗಳನ್ನು ) ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 212 ಪ್ರಕರಣಗಳನ್ನು ದಾಖಲಿಸಿ ರೂ. 1,00,900 ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಾಕ್‍ಡೌನ್ ಹಿನ್ನೆಲೆ ಎಸ್ಪಿ ಲಕ್ಷ್ಮೀ ಪ್ರಸಾಸ್ರಿಂದ ಸಿಟಿ ರೌಂಡ್ಸ್...
ಕೊರೂನಾ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಜಿಲ್ಲೆಯದ್ಯಾಂತ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿಯೇ 31 ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ನಗರದ್ಯಾಂತ ಚೆಕ್ ಪೋಸ್ಟ್ಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸಿಬ್ಬಂದಿಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ರೈತ ಸಂಪರ್ಕ ಕೇಂದ್ರಗಳು ಲಭ್ಯ
ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಹೋಬಳಿ ಮಟ್ಟದಲ್ಲಿರುವ ರೈತ ಸಂಪರ್ಕ ಕೇಂದ್ರಗಳು ಬೆಳಗ್ಗೆ 6ರಿಂದ 10ರವರೆಗೆ ಮಾತ್ರ ಕಾರ್ಯಾಚರಿಸಲಿವೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದ್ದಾರೆ. ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡುವ, ಕೃಷಿ ಪರಿಕರಗಳನ್ನು ಖರೀದಿಸುವ ಮತ್ತು ಇಲಾಖೆಯ ಇತರ ಸವಲತ್ತುಗಳನ್ನು ಪಡೆಯುವ ರೈತರು ಈ ಸಮಯದಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು ಎಂದು ಅವರು ಹೇಳಿದ್ದಾರೆ.
ಜಿಲ್ಲಾಧಿಕಾರಿಯಿಂದ ಭದ್ರಾವತಿ ವಿಐಎಸ್ಎಲ್ ಆಕ್ಸಿಜನ್ ಸಿಲಿಂಡರ್ ಬಾಟ್ಲಿಂಗ್ ಘಟಕಕ್ಕೆ ಭೇಟಿ...
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಭದ್ರಾವತಿಯ ವಿಐಎಸ್ಎಲ್ನ ಆಕ್ಸಿಜನ್ ಸಿಲಿಂಡರ್ ಬಾಟ್ಲಿಂಗ್ ಹಾಗೂ ಸದರನ್ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊರೂನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಆಕ್ಸಿಜನ್ ಸಿಲಿಂಡರ್ ಬೇಡಿಕೆ ಹೆಚ್ಚಿದೆ. ಇದರಿಂದ ವಿಐಎಸ್ಎಲ್ ಆಕ್ಸಿಜನ್ ಜಿಲ್ಲೆಗೆ ನೀಡಲಾಗುತ್ತಿದೆ. ಇಲ್ಲಿಂದ ಪ್ರತಿದಿನ ಕನಿಷ್ಠ 300 ಆಕ್ಸಿಜನ್ ಸಿಲಿಂಡರ್ ಉತ್ಪಾದನೆ ಮಾಡಲಾಗುತ್ತಿದೆ. ಈ ವೇಳೆ ಆಕ್ಸಿಜನ್ ಬಾಟ್ಲಿಂಗ್ ಮಾಡುವ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು. ನಂತರ ವಿಐಎಸ್ಎಲ್ನ ಅಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.