ಶಿವಮೊಗ್ಗ: ಜಿಲ್ಲೆಯಲ್ಲಿಂದು 17 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 335ಕ್ಕೆ ಏರಿಕೆಯಾಗಿದೆ.
ಇಂದು 4 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೂ ಆಸ್ಪತ್ರೆಯಿಂದ 141 ಜನ ಬಿಡುಗಡೆ ಆಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 190 ಜನ ಚಿಕಿತ್ಸೆ ಪಡೆಯುತ್ತಿದ್ದು, 4 ಜನ ಈ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ.
ಇಂದು ಪತ್ತೆಯಾದ ಕೊರೊನಾ ಪಾಸಿಟಿವ್ ಪ್ರಕರಣದಲ್ಲಿ ದ್ವಿತೀಯ ಸಂಪರ್ಕದಿಂದ 9 ಜನಕ್ಕೆ, ಸಂಪರ್ಕವೇ ಇಲ್ಲದ ಓರ್ವ ವ್ಯಕ್ತಿಗೆ, ಬೇರೆ ಜಿಲ್ಲೆಯಿಂದ ಬಂದ ನಾಲ್ವರಿಗೆ, SARI ಯಿಂದ ಇಬ್ಬರು ಹಾಗೂ ILI ನಿಂದ ಓರ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 70 ಕಂಟೈನ್ಮೆಂಟ್ ಝೋನ್ ರಚನೆ ಮಾಡಲಾಗಿದೆ. ಸಂಜೆ 6 ಗಂಟೆಗೆ ಲಾಕ್ ಡೌನ್ ಮಾಡಲಾಗುತ್ತಿದೆ.