ಶಿವಮೊಗ್ಗ: ಜಿಲ್ಲೆಯಲ್ಲಿಂದು 138 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,847 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 51 ಜನ ಗುಣಮುಖರಾಗಿ ಮನೆ ಸೇರಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ 1,731 ಜನ ಗುಣಮುಖರಾಗಿದ್ದಾರೆ. ಇಂದು 4 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಸದ್ಯ 1,057 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 223 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ನಲ್ಲಿ 415 ಜನ, ಖಾಸಗಿ ಆಸ್ಪತ್ರೆಯಲ್ಲಿ 151 ಜನ, ಮನೆಯಲ್ಲಿ 179 ಜನ ಹಾಗೂ ಆರ್ಯುವೇದಿಕ್ ಆಸ್ಪತ್ರೆಯಲ್ಲಿ 89 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 1,128 ಕಂಟೇನ್ಮೆಂಟ್ ಝೋನ್‌ಗಳನ್ನು ರಚನೆ ಮಾಡಲಾಗಿದೆ.
ತಾಲೂಕುವಾರು ಸೋಂಕಿತರ ವಿವರ: ಶಿವಮೊಗ್ಗ- 83, ಭದ್ರಾವತಿ-33, ಶಿಕಾರಿಪುರ-14, ಸಾಗರ-02, ತೀರ್ಥಹಳ್ಳಿ-03 ಬೇರೆ ಜಿಲ್ಲೆಯಿಂದ ಬಂದ 03 ಜನರಿಗೆ ಪಾಸಿಟಿವ್ ಬಂದಿದೆ.