ETV Bharat / state

ಶಿವಮೊಗ್ಗದಲ್ಲಿ ಒಂದೇ ದಿನ 2 ಕಡೆ ಹಲ್ಲೆ ಆರೋಪ: ಮೆಗ್ಗಾನ್‌ ಆಸ್ಪತ್ರೆಗೆ ದೌಡಾಯಿಸಿದ ಕೆಲ ಸಂಘಟನೆ ಕಾರ್ಯಕರ್ತರು - ಇಬ್ಬರು ಯುವಕರ ಮೇಲೆ ಹಲ್ಲೆ

ಶಿವಮೊಗ್ಗದಲ್ಲಿ ಒಂದೇ ದಿನ ಎರಡು ಕಡೆ ಇಬ್ಬರು ಯುವಕರ ಮೇಲೆ ಹಲ್ಲೆ ನಡೆದಿದ್ದು, ವಿಚಾರ ತಿಳಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮೆಗ್ಗಾನ್‌ ಆಸ್ಪತ್ರೆ ಮುಂಭಾಗ ಜಮಾಯಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Assault
ಹಲ್ಲೆ
author img

By

Published : Jun 26, 2023, 10:56 AM IST

Updated : Jun 26, 2023, 2:18 PM IST

ಶಿವಮೊಗ್ಗದಲ್ಲಿ ಯುವಕರಿಬ್ಬರ ಮೇಲೆ ಹಲ್ಲೆ

ಶಿವಮೊಗ್ಗ : ಕ್ಷುಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಟಿಪ್ಪು ನಗರದಲ್ಲಿ ಗಲಾಟೆ ನಡೆದಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆಯಲ್ಲಿ ಹೋಗುವಾಗ ಬೈಕ್‌ ಮತ್ತು ಆಟೋ ನಡುವೆ ಡಿಕ್ಕಿಯಾಗಿದೆ. ಇದೇ ವಿಚಾರಕ್ಕೆ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಸಂದೇಶ್‌ ಎಂಬಾತನ ಕಣ್ಣಿನ ಬಳಿ ಗಾಯವಾಗಿದ್ದು, ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಂಗಾ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚೂಪಾದ ಆಯುಧದಿಂದ ಹಲ್ಲೆ : ಇನ್ನು ದ್ರೌಪದಮ್ಮ ಸರ್ಕಲ್‌ ಬಳಿ ವಿಜಯ್‌ ಕುಮಾರ್‌ ಎಂಬಾತನ ಮೇಲೆ ಭಾನುವಾರ ಸಂಜೆ ಚೂಪಾದ ಆಯುಧದಿಂದ ಹಲ್ಲೆ ನಡೆಸಲಾಗಿದೆ. ಗುರುಸಿದ್ದಪ್ಪ ಮತ್ತು ತಸ್ರು ಎಂಬುವರು ಹಲ್ಲೆ ಮಾಡಿದ್ದಾರೆ ಎಂದು ವಿಜಯ್​ ಆರೋಪಿಸಿದ್ದಾನೆ. ಇದು ವೈಯಕ್ತಿಕ ದ್ವೇಷಕ್ಕೆ ನಡೆದ ಹಲ್ಲೆಯಾಗಿದ್ದು, ತನಿಖೆ ಬಳಿಕ ಪ್ರಕರಣ ದಾಖಲು ಮಾಡಲಾಗುವುದು ಎಂದು ಮಿಥುನ್‌ ಕುಮಾರ್‌ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕಠಿಣ ಕ್ರಮಕ್ಕೆ ಆಗ್ರಹ : ಟಿಪ್ಪು ನಗರ ಮತ್ತು ದ್ರೌಪದಮ್ಮ ಸರ್ಕಲ್‌ನಲ್ಲಿ ನಡೆದ ಹಲ್ಲೆ ಪ್ರಕರಣಗಳ ವಿಚಾರ ತಿಳಿದು ಹಿಂದೂ ಸಂಘಟನೆಗಳ ಕಾರ್ಯಕರ್ತರು ರಾತ್ರಿ ಮೆಗ್ಗಾನ್‌ ಆಸ್ಪತ್ರೆ ಮುಂಭಾಗ ಸೇರುವ ಮೂಲಕ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಮಹಿಳೆ ಕೊಲೆ ಯತ್ನ ಪ್ರಕರಣ - ಆರೋಪಿಗಳಿಗೆ 2 ವರ್ಷ ಕಾರಾಗೃಹ, 22 ಸಾವಿರ ರೂ. ದಂಡ

ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು : ಟಿಪ್ಪು ನಗರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ, ‘ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ. ‌

ಇದನ್ನೂ ಓದಿ : ಘಾಟಿ ಕ್ಷೇತ್ರದ ಸಮೀಪದ ತೋಟದಲ್ಲಿ ಹುಕ್ಕಾ ಪಾರ್ಟಿ: ಮದ್ಯದ ನಶೆಯಲ್ಲಿ ಗ್ರಾಮಸ್ಥರ ಮೇಲೆಯೇ ಯುವಕರಿಂದ ಹಲ್ಲೆ- ಆರೋಪ

ಪತ್ನಿ ಬೆನ್ನತ್ತಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ : ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬ ಪತ್ನಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ಹಾಸನದ ಹೊಳೆನರಸೀಪುರ ತಾಲೂಕಿನ ತಿರುಮನಹಳ್ಳಿಯಲ್ಲಿ ನಿನ್ನೆ ವರದಿಯಾಗಿತ್ತು. ಆಸ್ತಿ ವಿಚಾರವಾಗಿ ಶ್ರೀನಿವಾಸ್​ ವಿರುದ್ಧ ಪತ್ನಿ ಸವಿತಾ ದೂರು ದಾಖಲಿಸಿದ್ದು, ಕೋರ್ಟ್ ನಲ್ಲಿ ವಿಚಾರಣೆ ಮುಂದುವರೆದಿದೆ. ಸವಿತಾ, ಪತಿ ಬಳಿ ಜೀವನಾಂಶಕ್ಕೆ ಬೇಡಿಕೆಯಿಟ್ಟಿದ್ದರು. ಇದೇ ವಿಚಾರವಾಗಿ ನಿನ್ನೆ ಜಗಳ ತೆಗೆದು ಪತ್ನಿ ಮೇಲೆ ಶ್ರೀನಿವಾಸ್​ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಕುರುತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ : ಆಸ್ತಿ ವಿಚಾರವಾಗಿ ಕೌಟುಂಬಿಕ ಕಲಹ: ಪತ್ನಿಯ ಬೆನ್ನತ್ತಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿದ ಪತಿ!

Last Updated : Jun 26, 2023, 2:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.