ETV Bharat / state

188 ವಿಧಾನಸಭಾ ಕ್ಷೇತ್ರಗಳ ಪ್ರತಿ ಗ್ರಾ.ಪಂ.ಗೆ 20 ಮನೆ ಹಂಚಿಕೆ ನಿರ್ಧಾರಕ್ಕೆ ಸ್ವಾಗತ - 20 houses for every gram panchayath news

ರಾಜ್ಯದ 188 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ಗ್ರಾ.ಪಂ.ಗೆ 20 ಮನೆಗಳನ್ನು ಬಡವರಿಗೆ ಹಂಚಿಕೆ ಮಾಡುವ ಸರ್ಕಾರದ ನಿರ್ಧಾರವನ್ನು ಶಿವಮೊಗ್ಗದಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಸ್ವಾಗತಿಸಿದೆ.

20 houses for every gram panchayath of 188 vidhansabha constituency
ಬಡವರಿಗೆ ಮನೆ ಹಂಚಿಕೆ
author img

By

Published : Sep 8, 2020, 12:01 AM IST

ಶಿವಮೊಗ್ಗ: ರಾಜ್ಯದ 188 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ಗ್ರಾ.ಪಂ.ಗೆ 20 ಮನೆಗಳನ್ನು ಬಡವರಿಗೆ ಹಂಚಿಕೆ ಮಾಡುವ ಸರ್ಕಾರದ ನಿರ್ಧಾರವನ್ನು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಸ್ವಾಗತಿಸುತ್ತದೆ ಎಂದು ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ತಿಳಿಸಿದರು.

ಬಡವರಿಗೆ ಮನೆ ಹಂಚಿಕೆ

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ತಿಂಗಳ ಸೆ.16 ರೊಳಗೆ ರಾಜ್ಯಾದ್ಯಂತ 97134 ಮನೆಗಳನ್ನು ನಿರ್ಮಿಸಿಕೊಡಲು ತೀರ್ಮಾನಿಸಿರುವುದು ಒಳ್ಳೆಯ ಬೆಳವಣಿಗೆ. ಆದರೆ 2019 ರಲ್ಲಿ ಆಯ್ಕೆಯಾಗಿದ್ದ ಪಟ್ಟಿಯನ್ನು ರದ್ದು ಮಾಡಿ ಬೇರೆ ಪಟ್ಟಿಯನ್ನು ತಯಾರಿಸಲು ಮುಂದಾದರೆ ನಮ್ಮ ಸಂಘಟನೆ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

2019ರ ಜನವರಿ 29 ರಂದು ರಾಜೀವ್‌ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ರಾಜ್ಯದ ಎಲ್ಲಾ 5659 ಗ್ರಾಮ ಪಂಚಾಯಿತಿಗಳಿಗೆ ಅನ್ವಯವಾಗುವಂತೆ ಪ್ರತೀ ಗ್ರಾ.ಪಂ.ಗೆ 20 ಬಸವ ವಸತಿ ಯೋಜನೆಗಳನ್ನು ಮಂಜೂರು ಮಾಡಿದ್ದರು. ಈ ಆದೇಶದ ಅನ್ವಯ ರಾಜ್ಯದ ಎಲ್ಲಾ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ನಿಗಮದ ಆದೇಶದಂತೆ ಒಟ್ಟು 113800 ಮನೆಗಳನ್ನು ಆಯ್ಕೆ ಮಾಡಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ರಾಜೀವ್‌ಗಾಂಧಿ ಗ್ರಾಮೀಣ ವಸತಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಅನುಮೋದನೆಗಾಗಿ ಕಳುಹಿಸಿಕೊಟ್ಟಿದ್ದಾರೆ ಎಂದರು.

ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಆದೇಶದನ್ವಯ ಈಗಾಗಲೇ ಗ್ರಾಮಸಭೆಗಳನ್ನು ನಡೆಸಿ ಆಯ್ಕೆಮಾಡಿದ್ದ ಅರ್ಹ ಫಲಾನುಭವಿಗಳ ಪಟ್ಟಿಗೆ ಅನುಮೋದನೆ ನೀಡಲು ನಮ್ಮ ಸಂಘಟನೆ ಒತ್ತಾಯಿಸುತ್ತದೆ. ಫಲಾನುಭವಿಗಳ ಪಟ್ಟಿಯನ್ನು ಅಡ್ಡ ಮಾರ್ಗದಲ್ಲಿ ಆಯ್ಕೆಮಾಡಲು ಹೊರಟರೆ ನಮ್ಮ ಸಂಘಟನೆಯ ಹೋರಾಟವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಸುದ್ಧಿಗೋಷ್ಠಿಯಲ್ಲಿ ಹೆಚ್.ಎಂ. ಸಂಗಯ್ಯ, ಹೇಮಂತ್‌ಕುಮಾರ್, ಶಂಕರನಾಯ್ಕ್, ಎಲ್. ಆದಿಶೇಷ ಮುಂತಾದವರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.