ಶಿವಮೊಗ್ಗ: ಆಂಧ್ರದಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿದ್ದ 21 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದಿರುವ ತುಂಗಾ ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ನಗರಕ್ಕೆ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಕಾರ್ಯಾಚರಣೆ ನಡೆದಿದೆ.
ಶಿವಮೊಗ್ಗ ತಾಲೂಕಿನ ಹಾಲಲಕ್ಕವಳ್ಳಿ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೋವಾ ಕಾರಿನಲ್ಲಿ ಗಾಂಜಾವನ್ನು ಶಿವಮೊಗ್ಗಕ್ಕೆ ತರಲಾಗುತ್ತಿತ್ತು. ಕಾರಿನಲ್ಲಿದ್ದ ದೌಲತ್ ಅಲಿಯಾಸ್ ಗುಂಡು, ಮುಜೀಬ್ ಖಾನ್ ಅಲಿಯಾಸ್ ಬ್ರಸ್ಟ್, ಶೋಯೆಬ್ ಅಲಿಯಾಸ್ ಚೂಡಿ ಹಾಗೂ ಜಪ್ರುಲ್ಲಾ ಎಂಬುವರನ್ನು ಬಂಧಿಸಲಾಗಿದೆ.
ಗಾಂಜಾ ಮೌಲ್ಯವು ಅಂದಾಜು 6 ಲಕ್ಷ 35 ಸಾವಿರ ರೂ.ಗಳಾಗಿದ್ದು, ಕಾರನ್ನೂ ಕೂಡ ವಶಕ್ಕೆ ಪಡೆಯಲಾಗಿದೆ. ತುಂಗಾ ನಗರ ಪೊಲೀಸ್ ಇನ್ಸ್ಪೆಕ್ಟರ್ ದೀಪಕ್ ಹಾಗೂ ತಂಡವು ಭರ್ಜರಿ ಬೇಟೆಯಾಡಿದೆ.
ಇದನ್ನೂ ಓದಿ: ಲಾರಿಯ ಇಂಜಿನ್ ಬಳಿ ಬಚ್ಚಿಟ್ಟು 8 ಕೆಜಿ ಚಿನ್ನ ಕಳ್ಳಸಾಗಾಟ: ಇಬ್ಬರ ಬಂಧನ