ಶಿವಮೊಗ್ಗ: ಜಿಲ್ಲೆಯಲ್ಲಿಂದು 170 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 17,101 ಕ್ಕೆ ಏರಿಕೆಯಾಗಿದೆ.
ತಾಲೂಕುವಾರು ಕೊರೊನಾ ವಿವರ : ಶಿವಮೊಗ್ಗ-58, ಭದ್ರಾವತಿ-24, ಶಿಕಾರಿಪುರ-19, ತೀರ್ಥಹಳ್ಳಿ-16, ಸೊರಬ-08, ಸಾಗರ-13, ಹೊಸನಗರ-31, ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ.
ಗುಣಮುಖ : ಇಂದು 265 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಇಲ್ಲಿಯವರೆಗೆ 14,942 ಜನರು ಗುಣಮುಖರಾದಂತಾಗಿದೆ.
ಮೃತರಿಷ್ಟು : ಈ ದಿನ ಜಿಲ್ಲೆಯಲ್ಲಿ ಕೊರೊನಾಗೆ ಮೂವರು ಬಲಿಯಾಗಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 315ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳಿಷ್ಟು : ಸದ್ಯ ಜಿಲ್ಲೆಯಲ್ಲಿ 1,859 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 102 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್ನಲ್ಲಿ 91 ಜನರಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 206 ಸೋಂಕಿತರು, ಮನೆಯಲ್ಲಿ 1,418 ಜನ ಐಸೋಲೇಷನ್ನಲ್ಲಿದ್ದಾರೆ. ಆರ್ಯುವೇದ ಕಾಲೇಜಿನಲ್ಲಿ 43 ಸೋಂಕಿತರಿದ್ದಾರೆ.
ಇತರೆ ಮಾಹಿತಿ : ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಸಂಖ್ಯೆ 6,828 ಏರಿಕೆ ಆಗಿದೆ. ಇದರಲ್ಲಿ 4,127 ಝೋನ್ ವಿಸ್ತರಣೆಯಾಗಿದೆ. ಇಂದು ಜಿಲ್ಲೆಯಲ್ಲಿ 3,814 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 2,869 ಜನರ ವರದಿ ಬಂದಿದೆ.