ಶಿವಮೊಗ್ಗ: ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿದೆ. ಆದರೂ ಸರ್ಕಾರದ ಆದೇಶ ಉಲ್ಲಂಘಿಸಿದ ಅಂಗಡಿಯ ಮಾಲೀಕರ ವಿರುದ್ಧ THE KARNATAKA EPIDEMIC DISEASES ACT 2020 ಕಾಯ್ದೆಯ ಅಡಿಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.
ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರ ಒಟ್ಟು 289 ವಾಹನಗಳನ್ನು (267-ದ್ವಿ ಚಕ್ರ ವಾಹನ, 2 ಆಟೋ ಹಾಗೂ 20 ಕಾರುಗಳನ್ನು) ವಶಪಡಿಸಿಕೊಳ್ಳಲಾಗಿದೆ. ಒಟ್ಟು 222 ಪ್ರಕರಣಗಳನ್ನು ದಾಖಲಿಸಿ,ರೂ.93,700 ದಂಡ ವಸೂಲಿ ಮಾಡಲಾಗಿದೆ.