ಶಿವಮೊಗ್ಗ: ಸಾಗರ ತಾಲೂಕಿನ ಕೋಗಾರು ಬಳಿ ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಬಸ್ ಪಲ್ಟಿಯಾಗಿದೆ.
ಮುರುಡೇಶ್ವರದಿಂದ ಸಿಗಂದೂರಿಗೆ ಪ್ರಯಾಣಿಸುತ್ತಿದ್ದ 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಅನ್ನಪೂರ್ಣೇಶ್ವರಿ ಎಂಬ ಖಾಸಗಿ ಟೂರಿಸ್ಟ್ ಬಸ್ ಇದಾಗಿದೆ.
ಇಂದು ಬೆಳಗ್ಗೆ 5 ಗಂಟೆಗೆ ಘಟನೆ ನಡೆದಿದ್ದು, ಮಹಿಳೆಯೊಬ್ಬರಿಗೆ ಮೂಳೆ ಮುರಿತವಾಗಿದೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.