ETV Bharat / state

ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದಡಿ ಮೀಸಲಿಡಿ: ಶಿವಮೊಗ್ಗ ಡಿಸಿ - ಶಿವಮೊಗ್ಗ

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ಸೌಲಭ್ಯವನ್ನು ಬಳಸಿಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

Shivamogga
ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆ
author img

By

Published : Apr 20, 2021, 8:49 AM IST

ಶಿವಮೊಗ್ಗ: ಸರ್ಕಾರದ ಆದೇಶದ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ಅಡಿಯಲ್ಲಿ ಕಡ್ಡಾಯವಾಗಿ ಮೀಸಲಿರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ 2ನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡುತ್ತಿದೆ. ಎಲ್ಲಾ ಆಸ್ಪತ್ರೆಗಳು ತಮ್ಮಲ್ಲಿನ ಜನರಲ್ ಹಾಸಿಗೆ, ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್ ಸೌಲಭ್ಯ ಹೊಂದಿರುವ ಬೆಡ್‍ಗಳ ಪೈಕಿ ಶೇ.50ರಷ್ಟನ್ನು ಸರ್ಕಾರದ ಕೋಟಾದ ಅಡಿ ನೀಡಬೇಕು. ಒಂದು ವೇಳೆ ಈ ಬೆಡ್‍ಗಳನ್ನು ಬಳಸುವುದಿದ್ದರೆ ಜಿಲ್ಲಾಡಳಿತದಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಈ ನಿರ್ದೇಶನ ಉಲ್ಲಂಘಿಸುವ ಆಸ್ಪತ್ರೆಗಳ ವಿರುದ್ಧ ಕ್ರಮ ಜರುಗಿಸುವುದು ಖಚಿತ ಎಂದು ಎಚ್ಚರಿಕೆ ನೀಡಿದರು.

ಬಳಿಕ ಎಲ್ಲಾ ತಾಲೂಕಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕೋವಿಡ್ ನಿರ್ವಹಣೆ ಕುರಿತು ಸೂಚನೆಗಳನ್ನು ನೀಡಿದರು.

ಪ್ರಸ್ತುತ ಗಾಜನೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಸಜ್ಜುಗೊಳಿಸಲಾಗಿದೆ. ಎಲ್ಲಾ ತಾಲೂಕುಗಳಲ್ಲಿ ಸಹ ಕೋವಿಡ್​ ಕೇರ್ ಸೆಂಟರ್ ಸಿದ್ಧಪಡಿಸಿಟ್ಟುಕೊಳ್ಳಬೇಕು. ಮನೆ ಆರೈಕೆಯಲ್ಲಿ ಇರುವ ಕೋವಿಡ್ ಸೋಂಕಿತ ವ್ಯಕ್ತಿಗಳ ಮಾಹಿತಿಯನ್ನು ಪ್ರತಿದಿನ ಪಡೆಯಲು ತಾಲೂಕು ಮಟ್ಟದಲ್ಲಿ ತಂಡ ರಚಿಸಬೇಕು. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ತಾಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಂ ಆರಂಭಿಸಬೇಕು. ಪ್ರತಿ ತಾಲೂಕಿನಲ್ಲಿ ಕನಿಷ್ಟ 50 ಆಕ್ಸಿಜನ್ ಬೆಡ್ ಸೌಲಭ್ಯ ಇರಬೇಕು. ವ್ಯಾಕ್ಸಿನೇಷನ್ ಲಭ್ಯತೆ ಬಗ್ಗೆ ಪ್ರತಿ ದಿನ ಮಾಹಿತಿ ನೀಡಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಮುಂಜಾಗೃತೆ ಕ್ರಮಗಳ ಮೇಲುಸ್ತುವಾರಿಗೆ ಪೊಲೀಸ್ ಇಲಾಖೆ ನೇತೃತ್ವದಲ್ಲಿ ನೋಡಲ್ ಅಧಿಕಾರಿ ನೇಮಕ ಮಾಡಲಾಗುವುದು ಎಂದು ಅವರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.