ಶಿವಮೊಗ್ಗ: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ನಡೆಯಿತು.
ಕಾರ್ಕಳದಿಂದ ಶಿವಮೊಗ್ಗದ ಕಡೆ ಹೊರಟಿದ್ದ ಟೊಯೋಟೊ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಕಾರಿನಲ್ಲಿದ್ದ ಮೂವರು ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆ ಖರೀದಿಸಿದ ಕಾರು ಇದಾಗಿದ್ದು, ಮನೆ ತಲುಪುವ ಮುನ್ನವೇ ಕಣ್ಣೆದುರು ಸುಟ್ಟು ಕರಕಲಾಯಿತು.
ಈ ಘಟನೆಯಿಂದ ಆಗುಂಬೆ ಘಾಟಿಯಲ್ಲಿ ಕೆಲಕಾಲ ಸಂಚಾರ ಸ್ಥಗಿತವಾಗಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಆಗುಂಬೆ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇದನ್ನೂ ಓದಿ: ಹಿಂದೂಗಳ ಭಾವನೆಗೆ ಧಕ್ಕೆ ಬಾರದಂತೆ ಕಾನೂನು ತರುತ್ತೇವೆ: ಆರ್.ಅಶೋಕ್