ಶಿವಮೊಗ್ಗ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಡಿ.ಕೆ.ಶಿವಕುಮಾರ್ ಅಭಿಮಾನಿ ಸಂಘದ ಕಾರ್ಯಕರ್ತರ ವತಿಯಿಂದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಫೋಟೋವನ್ನು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದು, ಇದರಿಂದಾಗಿ ಅವರ ಘನತೆಗೆ ದಕ್ಕೆಯುಂಟಾಗುತ್ತದೆ ಹಾಗೂ ಇದರಿಂದ ಅವರ ಅಭಿಮಾನಿ ಬಳಗದ ಮನಸ್ಸಿಗೆ ನೋವುಂಟಾಗಿದೆ ಎಂದಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಫೋಟೋ ಹಾಕಿ ಕೆಲವರು ವಿಕೃತಿ ಮೆರೆದಿದ್ದಾರೆ. ಈ ಮೂಲಕ ಅವರನ್ನು ಅವಮಾನಿಸಿದ್ದಾರೆ. ಹಾಗಾಗಿ ಕೂಡಲೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.