ಶಿವಮೊಗ್ಗ: ಹೃದಯಾಘಾತದಿಂದ ಕರ್ತವ್ಯನಿರತ ಪೊಲೀಸ್ ಪೇದೆವೋರ್ವರು ಸಾವನ್ನಪ್ಪಿದ್ದಾರೆ. ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ರವಿ ಶೇಟ್ (38) ಮೃತ ಪೇದೆ.
ಇಂದು ಭಾರತ್ ಬಂದ್ ಪ್ರಯುಕ್ತ ಹೊಳೆಹೊನ್ನೂರಿನಲ್ಲಿ ಕರ್ತವ್ಯದಲ್ಲಿದ್ದಾಗ ರವಿ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆತರುವಾಗ ತೀವ್ರ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.
ಶಿವಮೊಗ್ಗದ ವಿದ್ಯಾನಗರದ ನಿವಾಸಿಯಾಗಿದ್ದ ಅವರಿಗೆ ಪತ್ನಿ ಹಾಗೂ ಓರ್ವ ಪುತ್ರಿ ಇದ್ದಾಳೆ. ರವಿ ಶೇಟ್ ನಿಧನಕ್ಕೆ ಪೊಲೀಸ್ ಇಲಾಖೆ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.