ಶಿವಮೊಗ್ಗ: ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ 18 ವಿದ್ಯಾರ್ಥಿಗಳಿಗೆ ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಕರೂರು ಹೋಬಳಿಯ ತುಮರಿ ಗ್ರಾಮದ ಬಳಿ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ನಲ್ಲಿ ಪ್ರಯಾಣಿಸುತ್ತಿದ್ದ 18 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಕೂಡಲೇ ಮಕ್ಕಳನ್ನು ಖಾಸಗಿ ವಾಹನ ಸೇರಿದಂತೆ, ಆಂಬ್ಯುಲೆನ್ಸ್ ಮೂಲಕ ಸಾಗರದ ಉಪ ವಿಭಾಗಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ದರ್ಮಾಪುರದ ಸರ್ಕಾರಿ ಹೈಸ್ಕೂಲಿನಿಂದ ಶಾಲಾ ಮಕ್ಕಳನ್ನು ಶಿವಮೊಗ್ಗ ಜಿಲ್ಲೆ ಸೇರಿದಂತೆ ಕರಾವಳಿ ಪ್ರದೇಶಕ್ಕೆ ಪ್ರವಾಸಕ್ಕೆ ಕರೆದೊಯ್ಯಲಾಗುತಿತ್ತು ಎಂದು ತಿಳಿದುಬಂದಿದೆ. ಬಸ್ನಲ್ಲಿದ್ದ ಉಳಿದ ವಿದ್ಯಾರ್ಥಿಗಳಿಗೆ ಬ್ಯಾಕೋಡು ಹಾಸ್ಟಲ್ನಲ್ಲಿ ಆಶ್ರಯ ನೀಡಲಾಗಿದೆ.
ಇದನ್ನೂ ಓದಿ: ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಗುದ್ದಿದ ಬಿಎಂಟಿಸಿ ಬಸ್