ಶಿವಮೊಗ್ಗ: ಹುಟ್ಟುಹಬ್ಬ ಆಚರಣೆಗೆ ಸ್ನೇಹಿತರೊಂದಿಗೆ ತೆರಳಿದ್ದ ಪಾಲಿಕೆ ಸದಸ್ಯೆಯ ಪುತ್ರ ಕಾಲುವೆಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಮಹಾನಗರ ಪಾಲಿಕೆಯ ಜಯನಗರ ವಾರ್ಡ್ನ ಬಿಜೆಪಿ ಸದಸ್ಯೆ ಆರತಿ ಪ್ರಕಾಶ್ ಅವರ ಪುತ್ರ ಅತೀಶ್ (24) ಮೃತಪಟ್ಟ ಯುವಕ ಎನ್ನಲಾಗಿದೆ.
ಹುಟ್ಟುಹಬ್ಬದ ಆಚರಣೆ ಮುಗಿಸಿಕೊಂಡು ವಾಪಸ್ ಬರುವ ವೇಳೆ ಬಿದ್ದ ವಾಟರ್ ಬಾಟಲಿ ತರಲು ಕಾಲುವೆಗೆ ಇಳಿದಿದ್ದಾನೆ. ನೀರಿನ ರಭಸಕ್ಕೆ ಕಾಲುವೆಯಲ್ಲಿಯೇ ಅತೀಶ್ ಕೊಚ್ಚಿ ಹೋಗಿದ್ದಾನೆ ಎನ್ನಲಾಗಿದೆ.
ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರು ಅತೀಶ್ ಶವದ ಹುಟುಕಾಟ ನಡೆಸುತ್ತಿದ್ದಾರೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.