ಶಿವಮೊಗ್ಗ: ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಡ್ರಗ್ಸ್ ನಿರ್ಮೂಲನೆಗೆ ಸೂಕ್ತ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಪ್ರಧಾನ ಅಂಚೆ ಕಚೇರಿ ಮುಂದೆ ಪತ್ರ ಚಳವಳಿ ನಡೆಸಲಾಯಿತು.
ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಒಂದು ಸಾಮಾಜಿಕ ಪಿಡುಗಾಗಿದ್ದು, ಡ್ರಗ್ಸ್ ಪ್ರಕರಣದಲ್ಲಿ ಅನೇಕ ನಟ, ನಟಿಯರು ಸೇರಿದಂತೆ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದಾರೆ. ಹಾಗಾಗಿ ಸರ್ಕಾರ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾಮೂಹಿಕ ಪತ್ರ ಚಳವಳಿ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಮಂಜುನಾಥ್, ವಿವೇಕ್, ರಘುವೀರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.