ETV Bharat / state

ಬೈಕ್ ಮತ್ತು ಕಾರು ನಡುವೆ ಅಪಘಾತ: ಸಹೋದರರು ಸಾವು

author img

By

Published : May 3, 2023, 3:37 PM IST

ಸೊರಬ ತಾಲೂಕಿನ ಉಳವಿ ಗ್ರಾಮದ ಬಳಿ ಬೈಕ್​ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

accident-between-bike-and-car-brothers-killed
ಬೈಕ್ ಮತ್ತು ಕಾರು ನಡುವೆ ಅಪಘಾತ: ಸಹೋದರರು ಸಾವು

ಶಿವಮೊಗ್ಗ: ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದ ಬಳಿ ನಡೆದಿದೆ. ಸುಹೇಲ್ (27) ಹಾಗೂ ಸಯ್ಯದ್ ಆಫ್ರಿದ್ (17) ಮೃತ ಸಹೋದರರು.

ಮೃತ ಸಹೋದರರು ಸಾಗರ ಪಟ್ಟಣದ ರಾಮನಗರ ಬಡಾವಣೆಯ ನಿವಾಸಿಗಳಾಗಿದ್ದು, ಉಳವಿ ಗ್ರಾಮದಲ್ಲಿ ನಡೆಯುತ್ತಿದ್ದ ಮದುವೆಗೆಂದು ಹೊರಟಿದ್ದ ವೇಳೆ ಪಲ್ಸರ್​​​ ಬೈಕ್​ ಮತ್ತು ವ್ಯಾಗನಾರ್ ಕಾರ್​​ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಸಾಗರ ಪಟ್ಟಣದಲ್ಲಿ ವೆಲ್ಡಿಂಗ್ ಕೆಲಸ‌ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಅಪಘಾತದಿಂದಾಗಿ ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ಥವಾಗಿತ್ತು. ಈ ಘಟನೆ ಕುರಿತು ಸೊರಬ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.