ಶಿವಮೊಗ್ಗ: ಜಿಲ್ಲೆಯ ಸಕ್ರೇಬೈಲು ಸಮೀಪ ನಿನ್ನೆ ಅಪಘಾತವೊಂದು ನಡೆದಿದ್ದು, ಇಂದು ಆ ಅಪಘಾತದ ವಿಡಿಯೋ ವೈರಲ್ ಆಗಿದೆ.
ತೀರ್ಥಹಳ್ಳಿಯಿಂದ ಕಾರಿನಲ್ಲಿ ಬರುತ್ತಿದ್ದವರು ಮಳೆ ಬರುತ್ತಿರುವುದನ್ನು ವಿಡಿಯೋ ಮಾಡಿಕೊಳ್ಳುತ್ತಾ ಬರುತ್ತಿದ್ದರು. ಇದೇ ವೇಳೆ ವೇಗವಾಗಿ ಬಂದ ಲಾರಿ ತಿರುವಿನಲ್ಲಿ ಹಿಂಭಾಗದಿಂದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಅಪಫಾತದ ರಭಸಕ್ಕೆ ವಿದ್ಯಾನಗರದ ಬೈಕ್ ಸವಾರ ಜನಾರ್ಧನ್ (19) ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಇನ್ನೋರ್ವ ಬೈಕ್ ಹಿಂಬದಿ ಸವಾರ ರಫೀಕ್ಗೆ ಗಂಭೀರ ಗಾಯವಾಗಿದ್ದು, ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೈಕ್ಗೆ ಡಿಕ್ಕಿ ಹೊಡೆದ ನಂತರ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಹ ಜಖಂಗೊಂಡಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಯಾಪಾದಿಂದ ಪಾರಾಗಿದ್ದಾರೆ. ಈ ಸಂಬಂಧ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.