ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಜಕ್ಕನಹಳ್ಳಿ ಬಳಿ ಹುಲ್ಲು ತುಂಬಿದ ಟ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ದಂಪತಿಗಳಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಕ್ಕನಹಳ್ಳಿ ಬಳಿ ಹುಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ಗೆ ಶಿರಾಳಕೊಪ್ಪದಿಂದ ಬಂದ ಕಾರು ಡಿಕ್ಕಿ ಹೊಡಿದಿದೆ. ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದ್ದು, ಟ್ರ್ಯಾಕ್ಟರ್ ಹಿಂಭಾಗ ಮಗುಚಿ ಬಿದ್ದಿದೆ.
ಗಾಯಗೊಂಡ ದಂಪತಿಗಳು ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.