ಶಿವಮೊಗ್ಗ: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಕ್ರೆಬೈಲು ಗ್ರಾಮದ ಬಳಿ ಸಂಭವಿಸಿದೆ.
ಮಹಮ್ಮದ್ ಜುಬೇರ್(23), ಆಫ್ರಿದಿ(24) ಹಾಗೂ ಸಮೀವುಲ್ಲಾ(25) ಮೃತರು. ಸಮೀರ್ ಹಾಗೂ ವಸಿವುಲ್ಲಾ ಎಂಬುವರು ಗಾಯಗೊಂಡಿದ್ದಾರೆ. ಮೃತರು ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾಗ ದುರ್ಘಟನೆ ನಡೆದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.