ಶಿವಮೊಗ್ಗ: ನಗರದ ಎಂಆರ್ಎಸ್ ವೃತ್ತದಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಓಮಿನಿ ನಡುವೆ ಅಪಘಾತ ಸಂಭವಿಸಿ ಓಮಿನಿ ಕಾರು ಸಂಪೂರ್ಣ ಜಖಂಗೊಂಡಿದೆ.
ಓಮಿನಿಯಲ್ಲಿದ್ದ 5 ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಮೈಸೂರು ಕಡೆಗೆ ಹೋಗುತ್ತಿದ್ದ ಬಸ್ ಹಾಗೂ ಎನ್ಆರ್ ಪುರದಿಂದ ಕಡೆಯಿಂದ ಸಾಗರಕ್ಕೆ ಹೋಗುತ್ತಿದ್ದ ಓಮಿನಿ ನಡುವೆ ಅಪಘಾತವಾಗಿದೆ.
ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪೂರ್ವ ವಲಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.