ETV Bharat / state

ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ: ಮೂವರಿಗೆ ನ್ಯಾಯಾಂಗ ಬಂಧನ - ಈಟಿವಿ ಭಾರತ ಕನ್ನಡ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ನಡೆಸಿದ ಕಲ್ಲು ತೂರಾಟ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ.

ಬಿಎಸ್ವೈ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ
ಬಿಎಸ್ವೈ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ
author img

By

Published : Mar 28, 2023, 2:25 PM IST

ಶಿವಮೊಗ್ಗ: ಶಿಕಾರಿಪುರ ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ 18 ಜನರ ಮೇಲೆ ಪ್ರಕರಣ ದಾಖಲಾಗಿದ್ದು ಮೂವರನ್ನು ಶಿಕಾರಿಪುರ ಟೌನ್ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ನಾಯ್ಕ, ಪುನೀತ್ ನಾಯ್ಕ ಹಾಗೂ ಕುಮಾರನಾಯ್ಕ ಬಂಧಿತರು.

ಪೊಲೀಸರು ನಿನ್ನೆಯೇ ಮೂವರನ್ನು ಬಂಧಿಸಿದ್ದು ನ್ಯಾಯಾಧೀಶರ ಮುಂದೆಯೂ ಹಾಜರುಪಡಿಸಿದ್ದಾರೆ. ಸದ್ಯ ಮೂವರನ್ನು ನ್ಯಾಯಾಂಗ ಬಂಧನದಲ್ಲಿಡಲಾಗಿದೆ. ನಿನ್ನೆ ನಡೆದ ಗಲಾಟೆಯ ದೃಶ್ಯವನ್ನು ಪರಿಶೀಲಿಸುತ್ತಿರುವ ಪೊಲೀಸರು ಉಳಿದ ಆರೋಪಿಗಳನ್ನು ಬಂಧಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.

ಮುಂದುವರೆದ ಪ್ರತಿಭಟನೆ: ಸದಾಶಿವ ವರದಿ ಜಾರಿ ಮಾಡುವುದನ್ನು ವಿರೋಧಿಸಿ ಕುಂಚೇನಹಳ್ಳಿಯಲ್ಲಿ ಇಂದು ಸಹ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ-ಸವಳಂಗ ರಸ್ತೆ ತಡೆದು ಪ್ರತಿಭಟನೆ ನಡೆಸಿದ ತಾಂಡಾ ನಿವಾಸಿಗರು, ಟೈರ್ ಸುಟ್ಟು ಆಕ್ರೋಶ ಹೊರಹಾಕಿದ್ದಾರೆ. ಶಿವಮೊಗ್ಗ ಹಾಗೂ ಸವಳಂಗ ರಸ್ತೆಯನ್ನು ಸುಮಾರು 1 ಗಂಟೆಗಳ ಕಾಲ ತಡೆದು ಪ್ರತಿಭಟನೆ ನಡೆಸಿದರು. ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು.

ಇದನ್ನೂ ಓದಿ: ಒಳ ಮೀಸಲಾತಿ ವಿಚಾರ.. ಪ್ರತಿಭಟನೆ ವೇಳೆ ಯಡಿಯೂರಪ್ಪ‌ ಮನೆ ಮೇಲೆ ಕಲ್ಲು ತೂರಾಟ

ಪ್ರಕರಣದ ಹಿನ್ನೆಲೆ: ಒಳಮೀಸಲಾತಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ ಸಮುದಾಯ ಸೋಮವಾರ ಪ್ರತಿಭಟನೆ ನಡೆಸಿತ್ತು. ಶಿಕಾರಿಪುರದಲ್ಲಿ ಕೆಲ ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದರು. ರಾಜ್ಯ ಸರ್ಕಾರ ತಂದಿರುವ ಒಳಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಸಮುದಾಯದ ಜನರು ಶಿಕಾರಿಪುರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು‌. ಅಂಬೇಡ್ಕರ್ ವೃತ್ತದಿಂದ ತಾಲೂಕು ಆಡಳಿತ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗಿತ್ತು. ತಾಲೂಕು ಆಡಳಿತ ಭವನದ ಕಡೆಗೆ ಪ್ರತಿಭಟನಾ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಕೆಲವರು ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ನಿವಾಸವಿರುವ ಮಾಳೇರಕೇರಿ ಕಡೆಗೆ ತೆರಳಿ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ನಿವಾಸದ ಕಿಟಕಿಯ ಗಾಜುಗಳು ಪುಡಿ ಪುಡಿಯಾಗಿದ್ದವು.

ಇದನ್ನು ಗಮನಿಸಿದ ಪೊಲೀಸರು ಕೂಡಲೇ ಬಿಎಸ್​ವೈ ಮನೆಗೆ ಭದ್ರತೆ ನೀಡಿದ್ದಾರೆ. ಮನೆಯ ಮುಂದೆ ತಾಲೂಕು ಆಡಳಿತದಿಂದ ಬ್ಯಾರಿಕೇಡ್​ ಅಳವಡಿಕೆ ಮಾಡಿ, ಸ್ಥಳದಲ್ಲೇ ಶಿಕಾರಿಪುರ ಡಿವೈಎಸ್​ಪಿ ಮೊಕ್ಕಾಂ ಹೂಡಿದ್ದರು. ಪ್ರತಿಭಟನೆ ವೇಳೆ ಬಿಜೆಪಿಯ ಫ್ಲೆಕ್ಸ್​ಗಳನ್ನೂ ಕಿತ್ತು ಹಾಕಲಾಗಿತ್ತು. ಅಲ್ಲದೇ ಟೈರ್​ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದರು. ಬ್ಯಾರಿಕೇಡ್​ ದಾಟಿ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಚದುರಿಸಿದ್ದರು.

ಇದನ್ನೂ ಓದಿ: ತಪ್ಪು ಗ್ರಹಿಕೆಯಿಂದ ನಮ್ಮ ಮನೆ ಮೇಲೆ ಕಲ್ಲು ತೂರಾಟ, ಯಾರ ಮೇಲೂ ಕ್ರಮ ಬೇಡ: ಬಿಎಸ್​ವೈ

ಘಟನೆ ಬಗ್ಗೆ ಬಿಎಸ್ವೈ ಪ್ರತಿಕ್ರಿಯೆ:​ ತಮ್ಮ ನಿವಾಸದ ಮೇಲೆ ನಡೆದಿರುವ ಕಲ್ಲಿನ ದಾಳಿ ಬಗ್ಗೆ ಬಿಎಸ್​ವೈ ಪ್ರತಿಕ್ರಿಯಿಸಿ, ತಪ್ಪು ಗ್ರಹಿಕೆಯಿಂದ ಬಂಜಾರ ಸಮುದಾಯದ ಜನರು ನಮ್ಮ ನಿವಾಸದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಹಾಗಾಗಿ ಯಾರ ಮೇಲೂ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ತಿಳಿಸಿರುವುದಾಗಿ ಬಿಎಸ್ವೈ ಹೇಳಿದ್ದಾರೆ​.

ಇದನ್ನೂ ಓದಿ: ಬಿ.ಎಸ್.ಯಡಿಯೂರಪ್ಪ ಮನೆ ಮೇಲೆ ಉದ್ದೇಶಪೂರ್ವಕ ದಾಳಿ: ಸಚಿವ ಆರಗ ಜ್ಞಾನೇಂದ್ರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.