ಶಿವಮೊಗ್ಗ: ಕಟ್ಟಡ ಕಾರ್ಮಿಕರೆಂದು ನಕಲಿ ದಾಖಲೆ ನೀಡಿ ಲೇಬರ್ ಕಾರ್ಡ್ ಪಡೆದು ದುರುಪಯೋಗ ಮಾಡಿಕೊಳ್ಳುತ್ತಿರುವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ನ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸುಂದರ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಅನೇಕರು ಸುಳ್ಳು ದಾಖಲೆ ನೀಡಿ ಕಾರ್ಡ್ ಪಡೆದುಕೊಳ್ಳುತ್ತಿದ್ದಾರೆ ಎಂದರು.
ಹಾಗಾಗಿ ಸರ್ಕಾರದ ಸೌಲಭ್ಯ ನೈಜ ಕಟ್ಟಡ ಕಾರ್ಮಿಕರಿಗೆ ಮಾತ್ರ ಸಿಗಬೇಕು. ಸುಳ್ಳು ದಾಖಲೆ ಸಲ್ಲಿಸಿ ಕಟ್ಟಡ ಕಾರ್ಮಿಕರ ಕಾರ್ಡ್ ನೀಡುತ್ತಿರುವವರ ಹಾಗೂ ಪಡೆದುಕೊಳ್ಳುತ್ತಿರುವವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.