ETV Bharat / state

ಶಿವಮೊಗ್ಗ ಗಾಂಧಿ ಪಾರ್ಕ್‌ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಗೆ ಕ್ರಮ: ಕೆ.ಎಸ್. ಈಶ್ವರಪ್ಪ - ಶಿವಮೊಗ್ಗ ಗಾಂಧಿ ಪಾರ್ಕ್‌ ಅಭಿವೃದ್ಧಿ

ನೂರಾರು ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಗಾಂಧಿ ಪಾರ್ಕ್‌ ಉದ್ಯಾನವನ್ನು ಈ ಹಿಂದೆ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿತ್ತು. ಪ್ರಸ್ತುತ ಇಲ್ಲಿ ಪ್ರತಿನಿತ್ಯ ವಾಯುವಿಹಾರಕ್ಕಾಗಿ ಬರುವವರು ಹಾಗೂ ಉದ್ಯಾನವನಕ್ಕೆ ಆಗಾಗ್ಗೆ ಭೇಟಿ ನೀಡುವ ಮಕ್ಕಳು, ಪೋಷಕರು ಹಾಗೂ ಸಾರ್ವಜನಿಕರ ಅಪೇಕ್ಷೆಯಂತೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

KS Eshwarappa
ಕೆ.ಎಸ್.ಈಶ್ವರಪ್ಪ
author img

By

Published : Jun 24, 2021, 7:10 PM IST

Updated : Jun 24, 2021, 9:02 PM IST

ಶಿವಮೊಗ್ಗ: ನಗರದ ಹೃದಯಭಾಗದಲ್ಲಿರುವ ಗಾಂಧಿ ಪಾರ್ಕನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಸಂಸದ ಬಿ.ವೈ. ರಾಘವೇಂದ್ರ, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಗಾಂಧಿ ಪಾರ್ಕಿನ ವ್ಯವಸ್ಥೆಗಳನ್ನು ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನೂರಾರು ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಈ ಉದ್ಯಾನವನ್ನು ಈ ಹಿಂದೆ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿತ್ತು. ಪ್ರಸ್ತುತ ಇಲ್ಲಿ ಪ್ರತಿನಿತ್ಯ ವಾಯುವಿಹಾರಕ್ಕಾಗಿ ಬರುವವರು ಹಾಗೂ ಉದ್ಯಾನವನಕ್ಕೆ ಆಗಾಗ್ಗೆ ಭೇಟಿ ನೀಡುವ ಮಕ್ಕಳು, ಪೋಷಕರು ಹಾಗೂ ಸಾರ್ವಜನಿಕರ ಅಪೇಕ್ಷೆಯಂತೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಈ ಉದ್ಯಾನದಲ್ಲಿ ಮಕ್ಕಳ ಆಟೋಟ ಹಾಗೂ ಮನೋರಂಜನಾ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಸಚಿವ ಕೆ.ಎಸ್.ಈಶ್ವರಪ್ಪ

ಅಲ್ಲದೇ 3 ಕೋಟಿ ರೂ.ಗಳ ವೆಚ್ಚದಲ್ಲಿ ಈ ಉದ್ಯಾನವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ. ಈ ಕಾಮಗಾರಿಯಲ್ಲಿ ಬೆಳಕಿನ ವ್ಯವಸ್ಥೆ, ಪಾದಚಾರಿಗಳ ಪಥ, ಮಕ್ಕಳ ಆಟಕ್ಕೆ ಅನುಕೂಲವಾಗುವಂತೆ ಪ್ರತ್ಯೇಕ ಸ್ಥಳ, ಈಜುಕೊಳ, ಓಪನ್‌ಜಿಮ್ ಮುಂತಾದವುಗಳನ್ನು ಅಳವಡಿಸಿಕೊಳ್ಳಲಾಗಿದೆ. ಮುಂದಿನ 151 ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಕಾರ್ಯಾರಂಭಗೊಳಿಸಲಾಗುವುದು ಎಂದರು.

ಸ್ಮಾರ್ಟ್‌ಸಿಟಿ ಯೋಜನೆಯಡಿ 8.50 ಕೋಟಿ ರೂ.ಗಳ ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ರೂಪಿಸಲಾಗಿದ್ದ ಕ್ರಿಯಾ ಯೋಜನೆ ಅನುಮೋದನೆ ದೊರೆತಿದ್ದು, ಅಂತಿಮ ಹಂತದಲ್ಲಿದೆ. ಗುಜರಾತಿನ ಕಂಪನಿಯೊಂದು ಈ ಥೀಮ್ ಪಾರ್ಕ್ ನಿರ್ಮಾಣಕ್ಕೆ ಉತ್ಸಾಹ ತೋರಿಸಿದ್ದಾರೆ. ಈ ಪಾರ್ಕ್‌ನ ನಿರ್ವಹಣೆ ವ್ಯವಸ್ಥಿತವಾಗಿರುವ ಕುರಿತು ಪಾಲಿಕೆ ವತಿಯಿಂದ, ಖಾಸಗಿ ಸಂಸ್ಥೆಗಳಿಂದ ಅಥವಾ ಖಾಸಗಿ ಕೈಗಾರಿಕೆಗಳಿಂದ ನಿರ್ವಹಿಸುವ ಕುರಿತು ಚರ್ಚಿಸಲಾಗಿದೆ. ಈ ಸಂಬಂಧ ಮುಂದಿನ ಒಂದು ವಾರದಲ್ಲಿ ಆಸಕ್ತ ಕೈಗಾರಿಕೆಗಳ ಮುಖ್ಯಸ್ಥರ ಸಭೆ ಕರೆದು ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ. ರಾಘವೇಂದ್ರ ಅವರು ಮಾತನಾಡಿ, ಅಗತ್ಯ ಸೌಲಭ್ಯಗಳೊಂದಿಗೆ ವೇಗವಾಗಿ ಬೆಳೆಯುತ್ತಿರುವ ಶಿವಮೊಗ್ಗ ನಗರದ ಮಧ್ಯಭಾಗದಲ್ಲಿರುವ ಗಾಂಧಿ ಉದ್ಯಾನ ಶಿವಮೊಗ್ಗಕ್ಕೆ ಶೋಭೆ ಹೆಚ್ಚಿಸಿದೆ. ಈಗಾಗಲೇ ಪ್ರವಾಸಿಗರವನ್ನು ಆಕರ್ಷಿಸುವ ಪ್ರವಾಸಿ ತಾಣವಾಗಿ ಶಿವಮೊಗ್ಗ ಪರಿವರ್ತನೆಗೊಳ್ಳುತ್ತಿದೆ ಎಂದರು.

ಗಾಂಧಿ ಉದ್ಯಾನವನ್ನು ಆಕರ್ಷಕ ಉದ್ಯಾನವನ್ನಾಗಿ ಪರಿವರ್ತಿಸುವ ಅಗತ್ಯವಿದೆ. ಅಲ್ಲದೆ ವ್ಯವಸ್ಥಿತವಾಗಿ ನಿರ್ವಹಿಸುವ ತುರ್ತು ಅಗತ್ಯವಿದೆ. ಇಲ್ಲಿನ ವಾತಾವರಣ ಶುದ್ಧವಾಗಿರುವಂತೆ ನೋಡಿಕೊಳ್ಳಬೇಕಾಗಿದೆ. ಪಾದಚಾರಿ ಪಥ ಅಭಿವೃದ್ಧಿ, ಯು.ಜಿ.ಡಿ, ಲೈನ್ ಪೂರ್ಣಗೊಳ್ಳಬೇಕು. ಶೌಚಾಲಯ, ಮಕ್ಕಳ ರೈಲು ಮುಂತಾದ ಕೆಲಸಗಳು ಪೂರ್ಣಗೊಳ್ಳಬೇಕು. ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಶೀಘ್ರದಲ್ಲಿ ಪಾರ್ಕ್‌ನ್ನು ಅಭಿವೃದ್ಧಿಪಡಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದರು.

ಶಿವಮೊಗ್ಗ ಜಿಲ್ಲೆ ಶಿವಶರಣರ ಅಪೂರ್ವ ಇತಿಹಾಸ ಹೊಂದಿದೆ. ಇಲ್ಲಿನ ಗಾಂಧಿಪಾರ್ಕ್‌ನ ಪ್ರವೇಶದ್ವಾರದಲ್ಲಿ ಬಸವೇಶ್ವರ ಪುತ್ಥಳಿ ಅನಾವರಣಗೊಳಿಸುವ ವಿಷಯ ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ಬಂದಿದೆ. ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ದೊರೆತು ಈಗಾಗಲೇ ಗುರುತಿಸಲಾಗಿರುವ ಈ ಸ್ಥಳದಲ್ಲಿ ಪುತ್ಥಳಿ ಲೋಕಾರ್ಪಣೆಗೊಳಿಸಲಾಗುವುದು ಎಂದರು.

Last Updated : Jun 24, 2021, 9:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.