ETV Bharat / state

ಸಫಾಯಿ ಕರ್ಮಚಾರಿಗಳ ಜೀವನ ಗುಣಮಟ್ಟ ಸುಧಾರಣೆಗೆ ಕ್ರಮ ಅಗತ್ಯ: ಜಗದೀಶ್ ಹಿರೇಮನಿ - ಸಫಾಯಿ ಕರ್ಮಚಾರಿಗಳ ಸ್ಥಿತಿಗತಿ

ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಸಫಾಯಿ ಕರ್ಮಚಾರಿಗಳ ಸ್ಥಿತಿಗತಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು.

Safai workers
ಪ್ರಗತಿ ಪರಿಶೀಲನಾ ಸಭೆ
author img

By

Published : Jan 10, 2020, 8:54 AM IST

ಶಿವಮೊಗ್ಗ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳ ಜೀವನಗುಣಮಟ್ಟ ಸುಧಾರಿಸಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ್ ಹಿರೇಮನಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಸಫಾಯಿ ಕರ್ಮಚಾರಿಗಳ ಸ್ಥಿತಿಗತಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಗುರುತಿಸಲಾಗಿರುವ 24 ಮ್ಯಾನ್ಯುವೆಲ್ ಸ್ಕಾವೆಂಜರ್ಸ್‍ಗಳ ಜೀವನ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ 40,000/-ರೂ.ಗಳ ಆರ್ಥಿಕ ನೆರವು ನೀಡಲಾಗಿದೆ. ಅಲ್ಲದೇ ಅವರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಿಕೊಡಲು ಸೂಚಿಸಲಾಗಿದೆ. ಸಫಾಯಿ ಕರ್ಮಚಾರಿಗಳು ಮರಣ ಹೊಂದಿದ್ದಲ್ಲಿ ಅವರ ಕುಟುಂಬದ ಅವಲಂಬಿತರಿಗೆ ಸರ್ಕಾರದ ಇತರ ವಸತಿ ಯೋಜನೆಯಡಿ ವಸತಿ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಗತಿ ಪರಿಶೀಲನಾ ಸಭೆ

70-80ರ ದಶಕದಲ್ಲಿ ಪೌರಕಾರ್ಮಿಕರು ಎಲ್ಲಿ ವಾಸವಾಗಿದ್ದರೋ ಅಲ್ಲೇ ಅವರಿಗೆ ಮನೆಗಳ ಹಕ್ಕುಪತ್ರ ನೀಡಬೇಕು. ಮನೆಗಳು ಶಿಥಿಲವಾಗಿದ್ದಲ್ಲಿ ಮನೆ ನಿರ್ಮಿಸಿ ಕೊಡಬೇಕು. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಈ ಸಮಸ್ಯೆಗೆ ಮುಂದಿನ 2-3 ತಿಂಗಳಲ್ಲಿ ಹಕ್ಕುಪತ್ರ ನೀಡಿ. ಅಂತಹವರಿಗೆ ಮನೆ ನಿರ್ಮಿಸಿಕೊಳ್ಳಲು ಮ್ಯಾನ್ಯುವೆಲ್ ಸ್ಕಾವೆಂಜರ್ಸ್ ಯೋಜನೆಯಡಿಯಲ್ಲಿ ವಿಶೇಷ ಅನುದಾನ ಕೊಡಿಸಲು ಯತ್ನಿಸುವುದಾಗಿ ಅವರು ತಿಳಿಸಿದ್ರು.

Intro:ಶಿವಮೊಗ್ಗ,

ಸಫಾಯಿ ಕರ್ಮಚಾರಿಗಳ ಜೀವನ ಗುಣಮಟ್ಟ ಸುಧಾರಣೆಗೆ ಕ್ರಮ ಅಗತ್ಯ
- ಜಗದೀಶ್ ಹಿರೇಮನಿ

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಪಾಯಿ ಕರ್ಮಚಾರಿಗಳ ಜೀವನಗುಣಮಟ್ಟ ಸುಧಾರಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ್ ಹಿರೇಮನಿ ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಸಫಾಯಿ ಕರ್ಮಚಾರಿಗಳ ಸ್ಥಿತಿಗತಿಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಫಾಯಿ ಕರ್ಮಚಾರಿಗಳ ಕನಿಷ್ಠ ಜೀವನ ನಿರ್ವಹಣೆಯ ದುರವಸ್ಥೆಗೆ ಅಂತ್ಯಹಾಡಬೇಕಾದ ಅಗತ್ಯವಿದೆ ಎಂದ ಅವರು, ಈಗಾಗಲೇ ಜಿಲ್ಲೆಯಲ್ಲಿ ಗುರುತಿಸಲಾಗಿರುವ 24ಮ್ಯಾನ್ಯುವೆಲ್ ಸ್ಕಾವೆಂಜರ್ಸ್‍ಗಳ ಜೀವನ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ 40,000/-ರೂ.ಗಳ ಆರ್ಥಿಕ ನೆರವು ನೀಡಲಾಗಿದೆ. ಅಲ್ಲದೇ ಅವರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಿಕೊಡಲು ಸೂಚಿಸಲಾಗಿದೆ. ಸಫಾಯಿ ಕರ್ಮಚಾರಿಗಳು ಮರಣ ಹೊಂದಿದ್ದಲ್ಲಿ ಅವರ ಕುಟುಂಬದ ಅವಲಂಬಿತರಿಗೆ ಸರ್ಕಾರದ ಇತರ ವಸತಿ ಯೋಜನೆಯಡಿ ವಸತಿ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
70-80ರ ದಶಕದಲ್ಲಿ ಪೌರಕಾರ್ಮಿಕರು ವಾಸವಾಗಿದ್ದವರಿಗೆ ಅವರಿರುವಲ್ಲಿಯೇ ಮನೆಗಳಿಗೆ ಹಕ್ಕುಪತ್ರ ನೀಡಬೇಕು. ಮನೆಗಳು ಶಿಥಿಲವಾಗಿದ್ದಲ್ಲಿ ಮನೆ ನಿರ್ಮಿಸಿ ಕೊಡಬೇಕು. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಈ ಸಮಸ್ಯೆಗೆ ಮುಂದಿನ 2-3ತಿಂಗಳಲ್ಲಿ ಹಕ್ಕುಪತ್ರ ನೀಡಿ. ಅಂತಹವರಿಗೆ ಮನೆ ನಿರ್ಮಿಸಿಕೊಳ್ಳಲು ಮ್ಯಾನ್ಯುವೆಲ್ ಸ್ಕಾವೆಂಜರ್ಸ್ ಯೋಜನೆಯಡಿಯಲ್ಲಿ ವಿಶೇಷ ಅನುದಾನ ಕೊಡಿಸಲು ಯತ್ನಿಸುವುದಾಗಿ ಅವರು ನುಡಿದರು.
ಈಗಾಗಲೇ ಗುರುತಿಸಲಾಗಿರುವ ಸಫಾಯಿ ಕರ್ಮಚಾರಿಗಳ ವಯಸ್ಸು ಮೀರಿದ್ದರೆ ಅವರ ಕುಟುಂಬದ ಅವಲಂಬಿತರಿಗೆ ಉದ್ಯೋಗಾವಕಾಶ, ಅಥವಾ ಸಾಲಸೌಲಭ್ಯ ಕೊಡಿಸಿ ಅವರ ಜೀವನೋಪಾಯಕ್ಕೆ ನೆರವಾಗಬೇಕು. ಖಾಯಂ ಉದ್ಯೋಗವಾಗದಿದ್ದರೂ ಪರ್ಯಾಯ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕೆಂದವರು ನುಡಿದರು.
ಸೇವಾವಧಿಯಲ್ಲಿ ಜೀವಿತದ ಬದುಕಿಗೆ ಅಂತ್ಯಹಾಡುವ ಸಫಾಯಿ ಕರ್ಮಚಾರಿಗಳಿಗೆ ಪಾಲಿಕೆ ವತಿಯಿಂದ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆಯುವಂತೆ ಸೂಚಿಸಿದ ಅವರು, ಕಾರ್ಯನಿರತರಿಗೆ ಆರೋಗ್ಯ, ಶಿಕ್ಷಣದ ಕುರಿತು ತರಬೇತಿ ನೀಡುವಂತೆ ಹಾಗೂ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲು, ಅಗತ್ಯವಿರುವವರಿಗೆ ಹೆಚ್ಚಿನ ಚಿಕಿತ್ಸೆಗೆ ನೆರವು ನೀಡುವಂತೆ ಸೂಚಿಸಿದರು. ಸಫಾಯಿ ಕರ್ಮಚಾರಿಗಳ ಬಳಕೆ ನಿಯಂತ್ರಿಸುವಲ್ಲಿ ಅವರಿಗೆ ತರಬೇತಿ ನೀಡಬೇಕಲ್ಲದೇ ಸಾರ್ವಜನಿಕರಿಗೂ ಅವರ ಸೇವೆಯನ್ನು ಪಡೆಯದಂತೆ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಶಾಲಾ-ಕಾಲೇಜು ಮಕ್ಕಳ ಮೂಲಕ ಮನೆಮನೆಗೆ ಕರಪತ್ರ ವಿತರಿಸುವ ಕೆಲಸ ಜಿಲ್ಲೆಯಿಂದಲೇ ಆರಂಭಗೊಳ್ಳಬೇಕೆಂದವರು ನುಡಿದರು.
ನಗರದ ಕೆ.ಎಸ್.ಆರ್.ಟಿ.ಸಿ.ಬಸ್‍ನಿಲ್ದಾಣದಲ್ಲಿ ಶೌಚವನ್ನು ನೇರವಾಗಿ ಚರಂಡಿಗೆ ಬಿಡಲಾಗುತ್ತಿದೆ. ಈ ಬಗ್ಗೆ ಈವರೆಗೂ ಗಮನಹರಿಸದಿರುವ ನಿಲ್ದಾಣಾಧಿಕಾರಿಗಳಿಗೆ ನೋಟೀಸ್ ಜಾರಿ ಮಾಡುವಂತೆ ಹಾಗೂ ಸುರಕ್ಷತೆ ಹಿನ್ನೆಲೆಯಲ್ಲಿ ಶೌಚಗುಂಡಿಯನ್ನು ಕಟ್ಟಿಸುವಂತೆ ಆದೇಶಿಸಲು ಸೂಚಿಸಿದ ಅವರು, ಭದ್ರಾವತಿಯ ಎಂ.ಪಿ.ಎಂ. ಮತ್ತು ವಿ.ಐ.ಎಸ್.ಎಲ್. ಗಳಲ್ಲಿ ಶೌಚಗುಂಡಿಗಳ ಸ್ವಚ್ಚತೆಗಾಗಿ ಇಂದಿಗೂ ಮಾನವ ಸೇವೆಯನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ದೂರುಗಳಿವೆ. ಈ ಬಗ್ಗೆ ಅಧಿಕಾರಿಗಳು ಖುದ್ದು ಸ್ಥಳಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಫಾಯಿ ಕರ್ಮಚಾರಿಗಳಿಗೆ ಅತ್ಯಾಧುನಿಕ ಮಾದರಿಯ ಉತ್ತಮ ಗುಣಮಟ್ಟದ ಕೈಗವಸು, ಮುಖವಾಡ ಮತ್ತು ಬೂಟುಗಳು ಸೇರಿದಂತೆ ಸುರಕ್ಷತಾ ಪರಿಕರಗಳನ್ನು ಕೊಡಿಸುವಂತೆ ಸೂಚಿಸಿದ ಅವರು, ಸಿಂಗಾಪುರ ಅಧ್ಯಯನ ಪ್ರವಾಸದಿಂದ ಹಿಂದುರುಗಿದ ಕರ್ಮಚಾರಿಗಳ ಸಲಹೆಯನ್ನು ಪಡೆದು, ಅನುಷ್ಠಾನಕ್ಕೆ ತರುವಂತೆ ಸೂಚಿಸಿದರು.
ಈವರೆಗೆ ಕರ್ಮಚಾರಿಗಳ ಖಾತೆಗೆ ಇ.ಪಿ.ಎಫ್ ಮತ್ತು ಇ.ಎಸ್.ಐ. ಹಣ ಜಮಾ ಮಾಡದಿರುವ ಮಾನವ ಸಂಪನ್ಮೂಲ ಸಂಸ್ಥೆಗಳ ಮುಖ್ಯಸ್ಥರಿಗೆ ನೋಟೀಸ್ ನೀಡಿ ಹಣ ಜಮಾ ಮಾಡಲು ಸೂಚಿಸಬೇಕು. ಪರಿಶಿಷ್ಟ ಜಾತಿಯವರಲ್ಲದ ಪೌರಸೇವಾ ಕಾರ್ಮಿಕರನ್ನು ಕಚೇರಿ ಕೆಲಸಗಳಿಗಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಗಂಭೀರ ಆರೋಪವಿದೆ. ಜೇಷ್ಠತೆಯ ಆಧಾರದ ಮೇಲೆ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವವರನ್ನು ಕಚೇರಿ ಕೆಲಸಗಳಿಗೆ ನೇಮಿಸಿಕೊಳ್ಳಬೇಕು. ಜಾತೀಯತೆ ಮಾಡುವ ಅಧಿಕಾರಿಗಳ ಮೇಲೆ ಅಟ್ರಾಸಿಟಿ ಮೊಕದ್ದಮೆ ದಾಖಲಿಸಲಾಗುವುದು ಎಂದವರು ಎಚ್ಚರಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಶ್ರೀಮತಿ ಜಿ.ಅನುರಾಧ, ಮಹಾನಗರಪಾಲಿಕೆ ಆಯುಕ್ತ ಚಿದಾನಂದ ವಟಾರೆ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪಾಲಿಕೆ, ನಗರಸಭೆ, ಪುರಸಭೆ, ಪ.ಪಂಚಾಯತಿಗಳ ಅಧಿಕಾರಿಗಳು ಹಾಗೂ ಜಿಲ್ಲಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.