ETV Bharat / state

ಶಾಲೆಗಳ ಆಸ್ತಿ ಆಯಾ ಶಾಲೆಗಳ ಹೆಸರಿಗೇ ನೋಂದಣಿ: ಸಚಿವ ಸುರೇಶ್ ಕುಮಾರ್ - ಶಿವಮೊಗ್ಗ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ

ಸರ್ಕಾರಿ ಶಾಲೆಗಳ ಆಸ್ತಿಪಾಸ್ತಿಗಳನ್ನು ಸಂಬಂಧಿಸಿದ ಶಾಲೆಗಳ ಹೆಸರಿಗೆ ನೋಂದಣಿ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕೆ. ಸುರೇಶ್ ಕುಮಾರ್ ತಿಳಿಸಿದರು.

Action to register property of the schools by name of the school: Minister Suresh Kumar
ಶಾಲೆಗಳ ಆಸ್ತಿ ಶಾಲೆಯ ಹೆಸರಿಗೇ ನೋಂದಣಿ ಮಾಡಿಸಲು ಕ್ರಮ: ಸಚಿವ ಸುರೇಶ್ ಕುಮಾರ್
author img

By

Published : Dec 29, 2019, 8:56 AM IST

ಶಿವಮೊಗ್ಗ: ಸರ್ಕಾರಿ ಶಾಲೆಗಳ ಆಸ್ತಿ-ಪಾಸ್ತಿಗಳನ್ನು ಆಯಾ ಶಾಲೆಗಳ ಹೆಸರಿಗೆ ನೋಂದಣಿ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕೆ. ಸುರೇಶ್ ಕುಮಾರ್ ಹೇಳಿದ್ರು.

ಶಾಲೆಗಳ ಆಸ್ತಿ ಶಾಲೆಯ ಹೆಸರಿಗೇ ನೋಂದಣಿ ಮಾಡಿಸಲು ಕ್ರಮ: ಸಚಿವ ಸುರೇಶ್ ಕುಮಾರ್

ಸಾಗರ ತಾಲೂಕಿನ ಚದರವಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಖಾಸಗಿ ಶಾಲೆಗಳ ಆಕರ್ಷಣೆ ಕಡಿಮೆ ಮಾಡಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವಂತಹ ವಾತಾವರಣ ಸೃಷ್ಟಿಸುವ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಶಾಲೆಗಳ ದುರಸ್ತಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಇದಕ್ಕಾಗಿ ರಾಜ್ಯದಲ್ಲಿ 530 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಗೆ 34.48 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಸಾಗರ ತಾಲೂಕಿನಲ್ಲಿ 134 ಶಾಲಾ ಕೊಠಡಿಗಳ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ‌ ಅಗತ್ಯ ಬಿದ್ದರೆ ಜಿಲ್ಲೆಗೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದರು.

ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸವನ್ನು ಸೆಪ್ಟಂಬರ್ ನಿಂದ ನವೆಂಬರ್ ಒಳಗಾಗಿ ಆಯೋಜಿಸಲು ಸೂಚನೆ ನೀಡಲಾಗುವುದು. ಕಾರ್ಯಕ್ರಮದಲ್ಲಿ ಶಾಸಕ ಹರತಾಳು ಹಾಲಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ರಾಘವೇಂದ್ರ ಸ್ವಾಮೀಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Intro:ಶಿವಮೊಗ್ಗ,
ಶಾಲೆಗಳ ಆಸ್ತಿ ಶಾಲೆಗಳ ಹೆಸರಿಗೆ ನೋಂದಣಿ ಮಾಡಿಸಲು ಕ್ರಮ: ಸಚಿವ ಸುರೇಶ್ ಕುಮಾರ್

ಸರಕಾರಿ ಶಾಲೆಗಳ ಆಸ್ತಿಪಾಸ್ತಿಗಳನ್ನು ಶಾಲೆಗಳ ಹೆಸರಿಗೆ ನೋಂದಣಿ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕೆ. ಸುರೇಶ್ ಕುಮಾರ್ ತಿಳಿಸಿದರು.

ಸಾಗರ ತಾಲೂಕಿನ ಚದರವಳ್ಳಿ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಖಾಸಗಿ ಶಾಲೆಗಳ ಆಕರ್ಷಣೆ ಕಡಿಮೆ ಮಾಡಿ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವಂತಹ ವಾತಾವರಣ ಸೃಷ್ಟಿಸುವ ಯೋಜನೆಗಳನ್ನು ರೂಪಿಸಲಾಗುತ್ತಿದೆ.

ಶಾಲೆಗಳ ದುರಸ್ತಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಇದಕ್ಕಾಗಿ ರಾಜ್ಯದಲ್ಲಿ 530 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಗೆ 34.48 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಸಾಗರ ತಾಲೂಕಿನಲ್ಲಿ 134 ಶಾಲಾ ಕೊಠಡಿಗಳ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ‌ ಅಗತ್ಯ ಬಿದ್ದರೆ ಜಿಲ್ಲೆಗೆ ಹೆಚ್ಚುವರಿ ಅನುದೆನ ಒದಗಿಸಲಾಗುವುದು.

ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸವನ್ನು ಸೆಪ್ಟಂಬರ್ ನಿಂದ ನವೆಂಬರ್ ಒಳಗಾಗಿ ಆಯೋಜಿಸಲು ಸೂಚನೆ ನೀಡಲಾಗುವುದು.

ಶಾಸಕ ಹರತಾಳು ಹಾಲಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ರಾಘವೇಂದ್ರ ಸ್ವಾಮೀಜಿ ಮತ್ತಿತರರು ಉಪಸ್ಥಿತರಿದ್ದರು.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.