ETV Bharat / state

ಶಿವಮೊಗ್ಗ ನಗರ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮ: ಕೆ.ಬಿ. ಶಿವಕುಮಾರ್ - ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ

ಅಸಮರ್ಪಕ ವಾಹನಗಳ ನಿಲುಗಡೆಯಿಂದಾಗಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಈ ಹಿನ್ನೆಲೆ ವಾಹನ ನಿಲುಗಡೆಗೆ ಪರ್ಯಾಯ ಸ್ಥಳ ಗುರುತಿಸಿ ಆದೇಶ ಹೊರಡಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಈ ಕುರಿತು ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.

action-to-regulate-city-traffic-congestion-said-by-kb-shivakumar
ಕೆ.ಬಿ.ಶಿವಕುಮಾರ್
author img

By

Published : Dec 11, 2019, 8:10 PM IST

ಶಿವಮೊಗ್ಗ: ಅಸಮರ್ಪಕ ವಾಹನಗಳ ನಿಲುಗಡೆಯಿಂದಾಗಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಈ ಹಿನ್ನೆಲೆ ವಾಹನ ನಿಲುಗಡೆಗೆ ಪರ್ಯಾಯ ಸ್ಥಳ ಗುರುತಿಸಿ ಆದೇಶ ಹೊರಡಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಈ ಕುರಿತು ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.

ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಪ್ರವಾಸಿ ಮಂದಿರದ ಸಮೀಪದಲ್ಲಿ ವಾಹನ ಸಂಚಾರ ಹೆಚ್ಚಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ವಾಹನಗಳ ವೇಗ ನಿಯಂತ್ರಣಕ್ಕಾಗಿ ಹಾಗೂ ಸಂಭವಿಸಬಹುದಾದ ಅಪಘಾತಗಳನ್ನು ತಡೆಯಲು ಕೂಡಲೇ ವೈಜ್ಞಾನಿಕವಾಗಿ ಹಂಪ್ಸ್​ಗಳನ್ನು ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಹಲವೆಡೆಗಳಲ್ಲಿ ನಗರಸಂಚಾರಿ ಬಸ್ಸುಗಳ ನಿಲುಗಡೆಗೆ ಸ್ಥಳ ನಿಗದಿಪಡಿಸಲಾಗಿದೆ. ಆದರೆ, ಖಾಸಗಿ ಬಸ್ಸುಗಳ ಚಾಲಕರು ರಸ್ತೆಯ ನಡುವೆ ಹಾಗೂ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿದ್ದಾರೆ. ಅದಕ್ಕಾಗಿ ಬಸ್ಸುಗಳ ನಿಲುಗಡೆಯ ಸ್ಥಳದಲ್ಲಿ ನಾಮಫಲಕ ಅಳವಡಿಸುವಂತೆ ಸೂಚಿಸಿದ ಅವರು, ನಿಯಮ ಉಲ್ಲಂಘಿಸಿ ಎಲ್ಲೆಂದರಲ್ಲಿ ಬಸ್ಸುಗಳನ್ನು ನಿಲ್ಲಿಸುವ ವಾಹನಗಳ ಹಾಗೂ ಚಾಲಕರ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಮುಂದಿನ 15ದಿನಗಳೊಳಗಾಗಿ ಆಟೋ ಸ್ಟ್ಯಾಂಡ್ ಹಾಗೂ ಬಸ್‍ ನಿಲ್ದಾಣವನ್ನು ಆರಂಭಿಸಲಾಗುವುದು. ಅದರ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿಯನ್ನು ಪಾಲಿಕೆ ಹಾಗೂ ಪೊಲೀಸ್ ಇಲಾಖೆಗಳಿಗೆ ವಹಿಸಲಾಗುವುದು ಎಂದು ತಿಳಿಸಿದರು.

ನಂತರ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎ. ಶಾಂತರಾಜು, ನಗರದ ಓ.ಟಿ. ರಸ್ತೆಯಲ್ಲಿನ ಚರಂಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಂಚಾರಕ್ಕೆ ಮುಕ್ತವಾಗಿರುವಂತೆ ನೋಡಿಕೊಳ್ಳಬೇಕು. ಅಲ್ಲದೇ ಆಲ್ಕೊಳ ಸರ್ಕಲ್‍ನಲ್ಲಿ ಬಸ್‍ ನಿಲುಗಡೆಗೆ ಸೂಕ್ತ ಸ್ಥಳ ನಿಗದಿಪಡಿಸಬೇಕು ಎಂದು ಸೂಚಿಸಿದರು.

Intro:ಶಿವಮೊಗ್ಗ,

ನಗರ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮ : ಕೆ.ಬಿ.ಶಿವಕುಮಾರ್

: ನಗರದ ಸುಮಾರು 12ರಸ್ತೆಗಳಲ್ಲಿ ಸಂಚಾರ ದಟ್ಟಣೆಯಿಂದಾಗಿ ಹಾಗೂ ವಾಹನಗಳ ನಿಲುಗಡೆಯಿಂದಾಗಿ ಪಾದಚಾರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ತೀವ್ರತರಹದ ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ವಾಹನ ನಿಲುಗಡೆಗೆ ಪರ್ಯಾಯ ಸ್ಥಳಗಳನ್ನು ಗುರುತಿಸಿದ್ದು ಆದೇಶ ಹೊರಡಿಸುವಂತೆ ಮನವಿ ಸಲ್ಲಿಸಿದ್ದಾರೆ. ಈ ಮನವಿಯನ್ನು ಪರಿಶೀಲಿಸಿ ಎರಡು ದಿನಗಳೊಳಗಾಗಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ವರದಿ ನೀಡುವಂತೆ ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನಗರದ ಪ್ರವಾಸಿ ಮಂದಿರದ ಸಮೀಪದಲ್ಲಿ ವಾಹನ ಸಂಚಾರ ಹೆಚ್ಚಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ವಾಹನಗಳ ವೇಗ ನಿಯಂತ್ರಣಕ್ಕಾಗಿ ಹಾಗೂ ಸಂಭವಿಸಬಹುದಾದ ಅಪಘಾತಗಳನ್ನು ತಡೆಯಲು ಕೂಡಲೇ ವೈಜ್ಞಾನಿಕವಾಗಿ ಹಂಪ್ಸ್‍ಗಳನ್ನು ಹಾಕುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಹಲವೆಡೆಗಳಲ್ಲಿ ನಗರಸಂಚಾರಿ ಬಸ್ಸುಗಳ ನಿಲುಗಡೆಗೆ ಸ್ಥಳ ನಿಗಧಿಪಡಿಸಲಾಗಿದೆ. ಆದರೆ, ಖಾಸಗಿ ಬಸ್ಸುಗಳ ಚಾಲಕರು ರಸ್ತೆಯ ನಡುವೆ ಹಾಗೂ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿದ್ದಾರೆ. ಅದಕ್ಕಾಗಿ ಬಸ್ಸುಗಳ ನಿಲುಗಡೆಯ ಸ್ಥಳದಲ್ಲಿ ನಾಮಫಲಕ ಅಳವಡಿಸುವಂತೆ ಸೂಚಿಸಿದ ಅವರು, ನಿಯಮ ಉಲ್ಲಂಘಿಸಿ ಎಲ್ಲೆಂದರಲ್ಲಿ ಬಸ್ಸುಗಳನ್ನು ನಿಲ್ಲಿಸುವ ವಾಹನಗಳ ಹಾಗೂ ಚಾಲಕರ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಒ.ಟಿ.ರಸ್ತೆ, ನೆಹರೂ ರಸ್ತೆ ಸೇರಿದಂತೆ ನಗರದ ಪ್ರಮುಖ ಜನನಿಬಿಡ ಸ್ಥಳಗಳಲ್ಲಿ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸುವಂತೆ ಮಹಾನಗರಪಾಲಿಕೆಯ ಅಭಿಯಂತರರಿಗೆ ಸೂಚಿಸಿದ ಅವರು, ಅಮೀರ್ ಅಹ್ಮದ್ ವೃತ್ತದ ಇಕ್ಕೆಲಗಳಲ್ಲಿರುವ ಅಂಡರ್‍ಪಾಸ್‍ನಲ್ಲಿ ಬೆಳಿಗ್ಗೆ 8ರಿಂದ ಸಂಜೆ 5.30ರವರೆಗೆ ಸಂಚರಿಸಲು ಪಾದಚಾರಿಗಳಿಗೆ ಮುಕ್ತವಾಗಿರಿಸಲಾಗುವುದು. ಅಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಸ್ವಚ್ಚತೆ ಹಾಗೂ ಬೆಳಕಿನ ವ್ಯವಸ್ಥೆಗೂ ಕ್ರಮ ವಹಿಸಲಾಗುವುದು ಎಂದವರು ನುಡಿದರು.
ರೈಲ್ವೇ ಸ್ಟೇಷನ್‍ನಲ್ಲಿ ಮುಂಗಡ ಪಾವತಿಸುವ ಆಟೋ ಸ್ಟ್ಯಾಂಡ್ ಆರಂಭಿಸಲು ಹಾಗೂ ಬಸ್‍ನಿಲ್ದಾಣ ಸ್ಥಾಪನೆಗೆ ಉದ್ದೇಶಿಸಲಾಗಿದ್ದು, ಅದಕ್ಕೆ ಪೂರಕವಾಗಿ ಸ್ಥಳ ಪರಿಶೀಲಿಸಿ ಸೂಕ್ತ ಸ್ಥಳವನ್ನು ಗುರುತಿಸುವಂತೆ ಪೊಲೀಸ್ ಹಾಗೂ ಟ್ರಾಫಿಕ್ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ ಅವರು, ಮುಂದಿನ 15ದಿನಗಳೊಳಗಾಗಿ ಆಟೋಸ್ಟ್ಯಾಂಡ್ ಹಾಗೂ ಬಸ್‍ನಿಲ್ದಾಣವನ್ನು ಆರಂಭಿಸಲಾಗುವುದು. ಅದರ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿಯನ್ನು ಪಾಲಿಕೆ ಹಾಗೂ ಪೊಲೀಸ್ ಇಲಾಖೆಗಳಿಗೆ ವಹಿಸಲಾಗುವುದು ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎ.ಶಾಂತರಾಜು ಅವರು ಮಾತನಾಡಿ, ನಗರದ ಓ.ಟಿ.ರಸ್ತೆಯಲ್ಲಿನ ಚರಂಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಂಚಾರಕ್ಕೆ ಮುಕ್ತವಾಗಿರುವಂತೆ ನೋಡಿಕೊಳ್ಳಬೇಕು. ಅಲ್ಲದೇ ಆಲ್ಕೊಳ ಸರ್ಕಲ್‍ನಲ್ಲಿ ಬಸ್‍ನಿಲುಗಡೆಗೆ ಸೂಕ್ತ ಸ್ಥಳ ನಿಗಧಿಪಡಿಸಬೇಕೆಂದವರು ನುಡಿದರು.
ನಗರದಿಂದ ಬೇರೆಡೆಗೆ ಪ್ರಯಾಣಿಸುವ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಕರಿಗೆ ಕಾಯ್ದಿರಿಸುವ ಸ್ಥಳಗಳಲ್ಲಿ ಪುರುಷರು ಆಸೀನರಾಗುತ್ತಿದ್ದಾರೆ. ಇದರಿಂದಾಗಿ ಮಹಿಳಾ ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ. ಬಸ್ಸುಗಳ ನಿರ್ವಾಹಕರು ಮಹಿಳಾ ಪ್ರಯಾಣಿಕರಿಗಾಗಿ ಕಾಯ್ದಿದಿರಿಸುವ ಆಸನಗಳನ್ನು ಅವರಿಗಾಗಿಯೇ ಮೀಸಲಿರಿಸುವಂತೆ ನೋಡಿಕೊಳ್ಳಬೇಕೆಂದವರು ನುಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಶೇಖರ್ ತೆಕ್ಕಣ್ಣನವರ್, ರಸ್ತೆ ಸಾರಿಗೆ ಅಧಿಕಾರಿ ಎಲ್.ದೀಪಕ್ ಸೇರಿದಂತೆ ಲೋಕೋಪಯೋಗಿ ಇಲಾಖೆ, ಮಹಾನಗರಪಾಲಿಕೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.