ಶಿವಮೊಗ್ಗ: ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕ ಹೆಚ್ಚಳ ವಿರೋಧಿಸಿ ಇಂದು ರಾಜ್ಯಾದ್ಯಂತ ಎಪಿಎಂಸಿ ಬಂದ್ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲೂ ಅಡಿಕೆ ವರ್ತಕರ ಸಂಘ ಎಪಿಎಂಸಿ ಬಂದ್ ಮಾಡಿ ಪ್ರತಿಭಟನೆ ನಡೆಸಿತು.
ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕವನ್ನು ಹೆಚ್ಚಳ ಮಾಡಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಎಪಿಎಂಸಿ ಬಂದ್ ಮಾಡಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಹಾಗೇಯೇ ಶಿವಮೊಗ್ಗದಲ್ಲೂ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸಿದರು.
ಓದಿ: ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವತಿ ಮೇಲೆ ಭಗ್ನ ಪ್ರೇಮಿಯಿಂದ ಮಾರಣಾಂತಿಕ ಹಲ್ಲೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಏಕಾಏಕಿಯಾಗಿ ಶೇ. 0.35 ಇದ್ದ ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕವನ್ನು ಶೇ. 1ಕ್ಕೆ ಹೆಚ್ಚಳ ಮಾಡಿರುವುದು ಸರಿಯಲ್ಲ. ಹಾಗಾಗಿ ಕೂಡಲೇ ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕವನ್ನು ರದ್ದುಗೊಳಿಸಬೇಕು. ಎಪಿಎಂಸಿ ಒಳಗೆ ಹೊರಗೆ ಒಂದೇ ರೀತಿಯ ತೇರಿಗೆ ವ್ಯವಸ್ಥೆ ಜಾರಿಗೋಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.