ETV Bharat / state

ಆ.10ರಂದು ರಾಜ್ಯಾದ್ಯಂತ ಕಾರ್ಪೊರೇಟ್​ ಕಂಪನಿಗಳೇ ಕೃಷಿ ಬಿಟ್ಟು ತೊಲಗಿ ಚಳವಳಿ - Shimoga latest news

ಆಗಸ್ಟ್.10ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯಾದ್ಯಂತ ಕಾರ್ಪೊರೇಟ್​​ ಕಂಪನಿಗಳೇ ಕೃಷಿ ಬಿಟ್ಟು ತೊಲಗಿ ಎಂಬ ಚಳವಳಿಯನ್ನು ಹಮ್ಮಿಕೊಂಡಿದ್ದಾರೆ.

Shimoga
Shimoga
author img

By

Published : Aug 5, 2020, 10:53 AM IST

ಶಿವಮೊಗ್ಗ: ಆಗಸ್ಟ್.10 ರಂದು ರಾಜ್ಯಾದ್ಯಂತ ಕಾರ್ಪೊರೇಟ್ ಕಂಪನಿಗಳೇ ಕೃಷಿ ಬಿಟ್ಟು ತೊಲಗಿ ಎಂಬ ಚಳವಳಿಯನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಗೌರವಾಧ್ಯಕ್ಷರಾದ ಹೆಚ್ .ಆರ್ ಬಸವರಾಜಪ್ಪ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಖಿಲ ಭಾರತ ಸಮನ್ವಯ ಸಮಿತಿಯ ವತಿಯಿಂದ 1942ರಲ್ಲಿ ಆಗಸ್ಟ್ 9 ರಂದು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿಯನ್ನು ನಡೆಸಿದ್ದರು. ಇದೀಗ ಆಗಸ್ಟ್.10 ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರಾಜ್ಯಾದ್ಯಂತ ಕಾರ್ಪೊರೇಟ್ ಕಂಪನಿಗಳೆ ಕೃಷಿ ಬಿಟ್ಟು ತೊಲಗಿ ಎಂಬ ಚಳವಳಿಯನ್ನು ರಾಜ್ಯದ ಎಲ್ಲ ತಾಲೂಕು ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಕೊರೊನಾ ಸಂದರ್ಭದಲ್ಲಿ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಶಕ್ತಿ ಕಾಯ್ದೆ, ಅಗತ್ಯ ವಸ್ತು ಕಾಯ್ದೆ,ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಾರಿಗೊಳಿಸಲಾಗಿದೆ. ಹಾಗಾಗಿ ಈ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಈ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದರು.

ತುಂಗಾ ಏತ ನೀರಾವರಿ ಯೋಜನೆಯಡಿ ಶಿವಮೊಗ್ಗ ತಾಲೂಕು ಕಸಬ ಹೋಬಳಿ ಆಲದೇವರು, ಹೊಸರು ಕೆರೆ ಗೌಡನ ಕೆರೆಗೆ ಹೋಗುವ ಮಾರ್ಗ ಮಧ್ಯೆ ಏರು ಕೊಳವೆಯ ಮೂಲಕ ನೀರು ಕೊಡುವ ಕಾಮಗಾರಿಯನ್ನು ಕೂಡಲೇ ರದ್ದು ಪಡಿಸಬೇಕೆಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.