ETV Bharat / state

ಗಾಬರಿ ಬೇಡ, ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತ ಸನ್ನದ್ದ: ಜಿಲ್ಲಾಧಿಕಾರಿ - flood in shimogga

ಶಿವಮೊಗ್ಗ ಜಿಲ್ಲೆಯ ಹಲವು ಕಡೆಗಳಲ್ಲಿ ಅತಿವೃಷ್ಟಿ ಉಂಟಾಗಿದ್ದು, ಪರಿಸ್ಥಿತಿ ಎದುರಿಸಲು ಆಡಳಿತ ಯಂತ್ರ ಸಜ್ಜಾಗಿದೆ. ತೊಂದರೆಗೊಳಗಾದ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್​​ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
author img

By

Published : Aug 9, 2019, 8:16 AM IST

ಶಿವಮೊಗ್ಗ: ಜಿಲ್ಲೆಯ ಹಲವು ಕಡೆಗಳಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯನ್ನು ಸರಿಪಡಿಸಲು ಜಿಲ್ಲಾಡಳಿತ ಸರ್ವ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಜಿ. ಶಿವಕುಮಾರ್ ತಿಳಿಸಿದರು.

ಜಿಲ್ಲಾ ನೋಡಲ್ ಕಾರ್ಯದರ್ಶಿ ಮಣಿವಣ್ಣನ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿ ಪರಿಸ್ಥಿತಿ ಎದುರಿಸಲು ಆಡಳಿತ ಯಂತ್ರ ಸಿದ್ದವಾಗಿದೆ. ಯಾವುದೇ ತೊಂದರೆ ಉಂಟಾದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಅತಿ ಮಳೆಯಿಂದಾಗಿ ಜಿಲ್ಲೆಯಲ್ಲಿ 2 ಜೀವ ಹಾನಿ ಸಂಭವಿಸಿದ್ದು, 9 ಜಾನುವಾರುಗಳು ಸಾವನ್ನಪ್ಪಿವೆ. 201 ಮನೆಗಳು ಭಾಗಶಃ ಹಾನಿಗೀಡಾಗಿವೆ. ಸುಮಾರು 7,748 ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕಾ ಜಮೀನಿಗೆ ನೀರು ನುಗ್ಗಿ ತೊಂದರೆಯಾಗಿದೆ. ಜೀವ ಹಾನಿ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ನೀಡಲಾಗುತ್ತಿದ್ದು, ಬೆಳೆ ಹಾನಿ ಬಗ್ಗೆ ಸಮೀಕ್ಷೆ ನಡೆಸಿ ಆದಷ್ಟು ಬೇಗ ಪರಿಹಾರ ನೀಡಲು ಸೂಚನೆ ನೀಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಕಂಟ್ರೋಲ್ ರೂಂ:

ನೆರೆ ಪರಿಸ್ಥಿತಿ ಬಗ್ಗೆ ದಿನದ 24 ಗಂಟೆಯಬ ನಿಗಾ ಇರಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಹಿರಿಯ ಅಧಿಕಾರಿಯೊಬ್ಬರನ್ನು ಮೇಲುಸ್ತುವಾರಿಗೆ ನಿಯೋಜಿಸಲಾಗಿದೆ. ದೂರವಾಣಿ ಸಂಖ್ಯೆ 1077 ಮಾತ್ರವಲ್ಲದೆ, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸಾಧ್ಯವಾಗುವಂತೆ ವಾಟ್ಸಾಪ್ ಮೊಬೈಲ್ ಸಂಖ್ಯೆ 8296283691 ಇದ್ದು, ಸಾರ್ವಜನಿಕರು ನೆರೆ ಹಾವಳಿ ಸಂಬಂಧಿಸಿದಂತೆ ಛಾಯಾಚಿತ್ರ, ವಿಡಿಯೋಗಳನ್ನು ಇದರಲ್ಲಿ ಅಪ್‍ಲೋಡ್ ಮಾಡಿ ಜಿಲ್ಲಾಡಳಿತದ ಗಮನಕ್ಕೆ ತರಬಹುದಾಗಿದೆ ಎಂದರು.

ಮಣಿವಣ್ಣನ್ ಮಾತನಾಡಿ, ಜಿಲ್ಲೆಯಲ್ಲಿ ಸದ್ಯಕ್ಕೆ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಜಿಲ್ಲಾಡಳಿತದ ವತಿಯಿಂದ ತಕ್ಷಣ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ಮಳೆ ಒಂದೆರಡು ದಿನ ಮುಂದುವರೆದರೆ ಕೆಲವೆಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿರುವ ಕಾರಣ ಸಹಾಯಕ್ಕೆ ಸಜ್ಜಾಗಿರುವಂತೆ ಎನ್‍ಡಿಆರ್‌ಎಫ್ ತಂಡಕ್ಕೆ ಮನವಿ ಮಾಡಲಾಗಿದೆ. ಸಾರ್ವಜನಿಕರು ಗಾಬರಿಗೊಳ್ಳುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದ್ರು.

Intro:ಶಿವಮೊಗ್ಗ,

ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತದಿಂದ ಸರ್ವ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಜಿಲ್ಲೆಯ ಹಲವು ಕಡೆಗಳಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯನ್ನು ಸರಿಪಡಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಜಿ.ಶಿವಕುಮಾರ್ ಅವರು ತಿಳಿಸಿದರು.

ಜಿಲ್ಲಾ ನೋಡಲ್ ಕಾರ್ಯದರ್ಶಿ ಮಣಿವಣ್ಣನ್ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿ ಪರಿಸ್ಥಿತಿ ಎದುರಿಸಲು ಆಡಳಿತ ಯಂತ್ರ ಸಜ್ಜಾಗಿದ್ದು, ಯಾವುದೇ ತೊಂದರೆ ಉಂಟಾದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಅತಿ ಮಳೆಯಿಂದಾಗಿ ಜಿಲ್ಲೆಯಲ್ಲಿ 2ಜೀವ ಹಾನಿ ಸಂಭವಿಸಿದ್ದು, 9ಜಾನುವಾರುಗಳು ಸಾವನ್ನಪ್ಪಿವೆ. 201 ಮನೆಗಳು ಭಾಗಶಃ ಹಾನಿಗೀಡಾಗಿವೆ. ಸುಮಾರು 7748 ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕಾ ಜಮೀನಿಗೆ ನೀರು ನುಗ್ಗಿ ಹಾನಿ ಉಂಟಾಗಿದೆ. ಜೀವ ಹಾನಿ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ನೀಡಲಾಗುತ್ತಿದ್ದು, ಬೆಳೆ ಹಾನಿ ಬಗ್ಗೆ ಸಮೀಕ್ಷೆ ನಡೆಸಿ ಆದಷ್ಟು ಬೇಗನೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ ಎಂದರು.

ಕಂಟ್ರೋಲ್ ರೂಂ: ನೆರೆ ಪರಿಸ್ಥಿತಿ ಬಗ್ಗೆ ದಿನದ 24ಗಂಟೆ ನಿಗಾ ಇರಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಹಿರಿಯ ಅಧಿಕಾರಿಯೊಬ್ಬರನ್ನು ಮೇಲುಸ್ತುವಾರಿಗೆ ನಿಯೋಜಿಸಲಾಗಿದೆ. ದೂರವಾಣಿ ಸಂಖ್ಯೆ 1077 ಮಾತ್ರವಲ್ಲದೆ, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸಾಧ್ಯವಾಗುವಂತೆ ವಾಟ್ಸಾಪ್ ಮೊಬೈಲ್ ಸಂಖ್ಯೆ 8296283691 ಇದ್ದು, ಸಾರ್ವಜನಿಕರು ನೆರೆ ಹಾವಳಿ ಸಂಬಂಧಿಸಿದಂತೆ ಛಾಯಾಚಿತ್ರ, ವಿಡಿಯೋಗಳನ್ನು ಇದರಲ್ಲಿ ಅಪ್‍ಲೋಡ್ ಮಾಡಿ ಜಿಲ್ಲಾಡಳಿತದ ಗಮನಕ್ಕೆ ತರಬಹುದಾಗಿದೆ ಎಂದರು.

ಮಣಿವಣ್ಣನ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಸಧ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಜಿಲ್ಲಾಡಳಿತದ ವತಿಯಿಂದ ತಕ್ಷಣ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ಮಳೆ ಒಂದೆರಡು ದಿನ ಮುಂದುವರೆದರೆ ಕೆಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಸಹಾಯಕ್ಕೆ ಸಜ್ಜಾಗಿರುವಂತೆ ಎನ್‍ಡಿಆರ್‍ಎಫ್ ತಂಡಕ್ಕೆ ಮನವಿ ಮಾಡಲಾಗಿದೆ. ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಸಾರ್ವಜನಿಕರು ಗಾಬರಿಗೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.

ಸಂಪರ್ಕ ವ್ಯವಸ್ಥೆಯನ್ನು ಉತ್ತಮಪಡಿಸಲಾಗಿದ್ದು, ಅಧಿಕಾರಿಗಳ ವಾಟ್ಸಾಪ್ ಗ್ರೂಪ್ ರಚಿಸಲಾಗಿದೆ. ಈ ಗ್ರೂಪ್ ಮೂಲಕ ಸಮಸ್ಯೆಗಳನ್ನು ತಕ್ಷಣ ನಿರ್ವಹಿಸಲು ಸೂಚನೆ ನೀಡಿ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿದೆ. ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸುಲಭ ಸಂಪರ್ಕ ಸಾಧಿಸಲು ಸಾಧ್ಯವಾಗುವಂತೆ ಎಲ್ಲಾ ಅಧಿಕಾರಿಗಳಿಗೆ ಟ್ವಿಟ್ಟರ್ ಖಾತೆ ತೆರೆಯಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಹಾನಿಗೀಡಾದ ವಿದ್ಯುತ್ ಸಂಪರ್ಕ ಪುನರ್ ಕಲ್ಪಿಸಲು ಆದ್ಯತೆ ನೀಡಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಮೂರು ಪ್ರವಾಹ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಇಲ್ಲಿ ಉತ್ತಮ ಊಟ ಉಪಾಹಾರ ಇತ್ಯಾದಿ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗಿದೆ.

ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್, ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜ್, ಎಎಸ್ಪಿ ಎಚ್.ಟಿ.ಶೇಖರ್, ಅಪರ ಜಿಲ್ಲಾಧಿಕಾರಿ ಅನುರಾಧ ಅವರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.