ETV Bharat / state

ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ : ಶಿವಮೊಗ್ಗ ಜಿಲ್ಲಾಧಿಕಾರಿ - Vote counting round

ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಮತ ಏಣಿಕೆ ಪ್ರಾರಂಭವಾಗಲಿದೆ. ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾಧಿಕಾರಿ ಆರ್.ಸೆಲ್ವಮಣಿ
ಜಿಲ್ಲಾಧಿಕಾರಿ ಆರ್.ಸೆಲ್ವಮಣಿ
author img

By

Published : May 11, 2023, 10:41 PM IST

ಶಿವಮೊಗ್ಗ : ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ತಿಳಿಸಿದ್ದಾರೆ. ಅಂಚೆ ಮತ ಎಣಿಕೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ಹೆಚ್ಚುವರಿಯಾಗಿ 6 ಮಂದಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.

ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರು ಶನಿವಾರ ಬೆಳಿಗ್ಗೆ 7 ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ಸೂಚನೆ ನೀಡಲಾಗಿದೆ. ಬೆಳಿಗ್ಗೆ 7ಗಂಟೆಗೆ ಭದ್ರತಾ ಕೊಠಡಿಯ ಬಾಗಿಲನ್ನು ತೆರೆಯಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್‌ಗಳು ಮತ್ತು ಸಹಾಯಕ ಚುನಾವಣಾಧಿಕಾರಿಯ ಟ್ಯಾಬುಲೇಷನ್ ಟೇಬಲ್ ಇರುತ್ತದೆ. ಮತ ಎಣಿಕೆ ಸ್ಥಳದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟರಿಗೆ ಹಾಗೂ ಮತ ಎಣಿಕೆ ಏಜೆಂಟರು ಪ್ರವೇಶಿಸಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಂಚೆ ಮತಪತ್ರಗಳ ಎಣಿಕೆ ಮತ್ತು ಕಂಟ್ರೋಲ್ ಯುನಿಟ್ ಮೂಲಕ ಮತ ಎಣಿಕೆಯನ್ನು ಬೆಳಿಗ್ಗೆ 8 ಗಂಟೆಗೆ ಆರಂಭಿಸಲಾಗುವುದು. ಪ್ರತಿ ಮತ ಎಣಿಕೆ ಟೇಬಲ್‌ಗೆ ಒಬ್ಬ ಮೇಲ್ವಿಚಾರಕ, ಒಬ್ಬ ಸಹಾಯಕ ಮತ್ತು ಒಬ್ಬ ಮೈಕ್ರೋ ಅಬ್ಸರ್ವರ್ ನೇಮಕ ಮಾಡಿ ತರಬೇತಿ ನೀಡಲಾಗಿದೆ. ಇವಿಎಂ ಮತ ಎಣಿಕೆ ಪೂರ್ಣಗೊಂಡ ಬಳಿಕ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಐದು ವಿವಿಪ್ಯಾಟ್‌ಗಳನ್ನು ಆಯ್ಕೆ ಮಾಡಿ ಎಣಿಕೆ ಮಾಡಲಾಗುವುದು. ಮತ ಎಣಿಕೆ ಹಾಲ್‌ನಲ್ಲಿ ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿರ್ಬಂಧಿಸಲಾಗಿದ್ದು, ಮತ ಎಣಿಕೆ ಆವರಣದ ಸುತ್ತ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಮಾಹಿತಿ ನೀಡಿದರು.

ಮತ ಎಣಿಕೆ ಸುತ್ತು ವಿವರ : ಶಿವಮೊಗ್ಗ ಗ್ರಾಮೀಣ ಕ್ಷೇತ್ರದಲ್ಲಿ 247 ಮತಗಟ್ಟೆಗಳಿದ್ದು, 18 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಇದೇ ರೀತಿ ಭದ್ರವಾತಿ 253 ಮತಗಟ್ಟೆ 19 ಸುತ್ತು, ಶಿವಮೊಗ್ಗ 284 ಮತಗಟ್ಟೆ 21 ಸುತ್ತು, ತೀರ್ಥಹಳ್ಳಿ 258 ಮತಗಟ್ಟೆ 19 ಸುತ್ತು, ಶಿಕಾರಿಪುರ 234 ಮತಗಟ್ಟೆ 17 ಸುತ್ತು, ಸೊರಬ 239 ಮತಗಟ್ಟೆ 18 ಸುತ್ತು ಹಾಗೂ ಸಾಗರದಲ್ಲಿ 267 ಮತಗಟ್ಟೆಗಳಿದ್ದು, 20 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಜಿಲ್ಲಾಧಿಕಾರಿ ಅಭಿನಂದನೆ : ಜಿಲ್ಲೆಯಲ್ಲಿ ಮತದಾನ ಸಂಪೂರ್ಣ ಶಾಂತಿಯುತವಾಗಿ ನಡೆದಿದ್ದು ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಜಿಲ್ಲೆಯಲ್ಲಿ ಒಟ್ಟು 1782 ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, 8,100 ಸಿಬ್ಬಂದಿ ಚುನಾವಣಾ ಕರ್ತವ್ಯ ನಿರ್ವಹಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ ಎಲ್ಲಾ ಮತದಾರರಿಗೆ ಹಾಗೂ ಸುಗಮವಾಗಿ ಮತದಾನ ಆಯೋಜಿಸಲು ಸಹಕರಿಸಿದ ಎಲ್ಲಾ ಅಧಿಕಾರಿ/ಸಿಬ್ಬಂದಿಗೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ : ಎಲೆಕ್ಷನ್ ಮೂಡಿಂದ್ ರಿಲ್ಯಾಕ್ಸ್ ಮೂಡಿಗೆ ಜಾರಿದ ಅಭ್ಯರ್ಥಿಗಳು..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.