ETV Bharat / state

ಶಿವಮೊಗ್ಗ ಜಿಲ್ಲೆಯಲ್ಲಿ ಮತದಾನಕ್ಕೆ ಸಕಲ ಸಿದ್ಧತೆ: 14,73,327 ಮತದಾರರು ಹಕ್ಕು ಚಲಾಯಿಸಲು ರೆಡಿ: ಡಿಸಿ ಸೆಲ್ವಮಣಿ

ಶಿವಮೊಗ್ಗದಲ್ಲಿ ನಾಳೆ ಮತದಾನಕ್ಕೆ ಸಿದ್ಧತೆಯ ಬಗ್ಗೆ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ ಸೆಲ್ವಮಣಿ ಮಾಹಿತಿ ನೀಡಿದ್ದಾರೆ.

All preparations for voting in Shimoga district
ಶಿವಮೊಗ್ಗ ಜಿಲ್ಲೆಯಲ್ಲಿ ಮತದಾನಕ್ಕೆ ಸಕಲ ಸಿದ್ಧತೆ
author img

By

Published : May 9, 2023, 7:02 PM IST

ಶಿವಮೊಗ್ಗ ಜಿಲ್ಲೆಯಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಶಿವಮೊಗ್ಗ: ವಿಧಾನಸಭಾ ಚುನಾವಣೆ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸೆಲ್ವಮಣಿ ಆರ್ ತಿಳಿಸಿದ್ದಾರೆ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 7,28,886 ಪುರುಷ, 7,43,713 ಮಹಿಳಾ, 32 ಇತರ ಹಾಗೂ 696 ಸೇವಾ ಮತದಾರರು ಸೇರಿ ಒಟ್ಟು 14,73,327 ಮತದಾರರಿದ್ದಾರೆ.

ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಮತಗಟ್ಟೆಗಳಿಗೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ 1775 + 7 ಪೂರಕ ಸೇರಿದಂತೆ ಒಟ್ಟು 1782 ಮತಗಟ್ಟೆಗಳಿವೆ. ಜಿಲ್ಲೆಯಲ್ಲಿ ಮತದಾನಕ್ಕೆ ಸಂಬಂಧಿದಂತೆ 2,050 ಪಿಆರ್​ಒ, 2,050 ಎಪಿಆರ್​ಓ, 4,100 ಪಿಒ ಸೇರಿದಂತೆ ಒಟ್ಟು 8,200 ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹಾಗೂ 83 ಮೈಕ್ರೋ ಅಬ್ಸರ್ವರ್​ಗಳನ್ನು ನೇಮಕ ಮಾಡಲಾಗಿದೆ.

ಒಟ್ಟು 8,156 ಸಿಬ್ಬಂದಿಯನ್ನು ಮತಗಟ್ಟೆಗಳಿಗೆ ಕರೆದೊಯ್ಯಲು ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರಕ್ಕೆ 16 ಬಸ್, ಭದ್ರಾವತಿಗೆ 40, ಶಿವಮೊಗ್ಗ ನಗರಕ್ಕೆ 15, ತೀರ್ಥಹಳ್ಳಿಗೆ 45, ಶಿಕಾರಿಪುರಕ್ಕೆ 43, ಸೊರಬಕ್ಕೆ 36, ಸಾಗರಕ್ಕೆ 31 ಮತ್ತು ಹೊಸನಗರಕ್ಕೆ 14 ಸೇರಿದಂತೆ ಒಟ್ಟು 240 ಬಸ್‍ಗಳನ್ನು ನಿಯೋಜಿಸಲಾಗಿದೆ.

ಮಸ್ಟರಿಂಗ್, ಡಿಮಸ್ಟರಿಂಗ್ ಮತ್ತು ಮತ ಎಣಿಕೆ ಸ್ಥಳಗಳನ್ನು ಗುರುತಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್, ಹೆಚ್ ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಮತ್ತು ಎಸ್.ಆರ್. ನಾಗಪ್ಪಶೆಟ್ರಿ ಸ್ಮರಕ ರಾಷ್ಟ್ರೀಯ ಅನ್ವಯಿಕ ಸೈನ್ಸ್ ಪಿಯು ಕಾಲೇಜಿನಲ್ಲಿ ನಡೆಯಿತು. ಭದ್ರಾವತಿ ಕ್ಷೇತ್ರದ್ದು, ಸಂಚಿ ಹೊನ್ನಮ್ಮ ಬಾಲಿಕ ಪಪೂ ಕಾಲೇಜಿನಲ್ಲಿ, ಶಿವಮೊಗ್ಗ ಕ್ಷೇತ್ರದ್ದು, ಸಹ್ಯಾದ್ರಿ ವಾಣಿಜ್ಯ ಕಾಲೇಜಿನಲ್ಲಿ, ತೀರ್ಥಹಳ್ಳಿ ಕ್ಷೇತ್ರದ್ದು, ಡಾ.ಯು.ಆರ್ ಅನಂತಮೂರ್ತಿ ಕಾಲೇಜಿನಲ್ಲಿ, ಶಿಕಾರಿಪುರ ಕ್ಷೇತ್ರದ್ದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಸೊರಬ ಕ್ಷೇತ್ರದ್ದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಸಾಗರ ಕ್ಷೇತ್ರದ್ದು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಮತ ಎಣಿಕೆ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ ಸೆಲ್ವಮಣಿ ತಿಳಿಸಿದ್ದಾರೆ.

ಇಂದು ಬೆಳಗ್ಗೆಯಿಂದಲೇ ಆಯಾ ಮಸ್ಟರಿಂಗ್ ಸ್ಥಳಗಳಿಗೆ ತೆರಳಿ, ಇವಿಎಂ ಯಂತ್ರದ ಜೊತೆಗೆ ಪೊಲೀಸ್ ಅಧಿಕಾರಿಗಳೊಂದಿಗೆ ಚುನಾವಣಾ ಸಿಬ್ಬಂದಿ ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿದರು.

ಕುಡಿದು ಬಂದ ಇಬ್ಬರಿಗೆ ವೈದ್ಯಕೀಯ ಪರೀಕ್ಷೆ: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್​ಗೆ ಕುಡಿದು ಬಂದ ಇಬ್ಬರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರನ್ನು ಚುನಾವಣ ಕರ್ತವ್ಯದಿಂದ ಹೊರಕ್ಕೆ ಕಳುಹಿಸಲಾಗಿದೆ. ಹೆಚ್.ಎಸ್‌.ರುದ್ರಪ್ಪ ಪಿಯು ಕಾಲೇಜಿನಲ್ಲಿ ಮಂಗಳವಾರ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್ ನಡೆಯುತ್ತಿತ್ತು. ಈ ವೇಳೆ, ಗ್ರಾಮಾಂತರ ಭಾಗದ ಮತಗಟ್ಟೆಗಳಿಗೆ ಮತ ಯಂತ್ರಗಳನ್ನು ಸಿಬ್ಬಂದಿ ಕೊಂಡೊಯ್ಯಬೇಕು. ಈ ವೇಳೆ, ಶಿಕ್ಷಕ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿ ಪಾನಮತ್ತರಾಗಿ ಬಂದಿದ್ದಾರೆ.

ಇಬ್ಬರಲ್ಲಿ ಒಬ್ಬರು ಫಸ್ಟ್ ಪೋಲಿಂಗ್ ಆಫೀಸರ್ ಆಗಿದ್ದರೆ, ಮತ್ತೊಬ್ಬರು ಎರಡನೆ ಬೂತ್ ಆಫೀಸರ್ ಆಗಿದ್ದಾರೆ. ಹಿರಿಯ ಅಧಿಕಾರಿಗಳ ಗಮನಕ್ಕೆ ಇಬ್ಬರು ಮದ್ಯ ಸೇವನೆ ಮಾಡಿರುವುದು ಕಂಡು ಬಂದಿದೆ. ಸದ್ಯ ಮದ್ಯ ಸೇವಿಸಿದ್ದಾರೆ ಎಂಬ ಆರೋಪ ಹೊತ್ತಿರುವ ಇಬ್ಬರ ನ್ಯೂ ಮೆಗ್ಗಾನ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ. ವೈದ್ಯಕೀಯ ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭೆ ಚುನಾವಣೆ : ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.